ಪ್ರಧಾನಿ ಮೋದಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಕಡೆಗಣನೆ: ಕೇಜ್ರಿವಾಲ್
ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ವಾಕ್ಸಮರ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ...

ನವದೆಹಲಿ: ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ವಾಕ್ಸಮರ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಕಡೆಗಣಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ನರೇಂದ್ರ ಮೋದಿ ಸರ್ಕಾರ ಮಾಜಿ ಪ್ರಧಾನಿ ಜನ್ಮದಿನ ಆಚರಣೆಗೆ ಮತ್ತು ದುರಸ್ಥಿ ಕಾರ್ಯಕ್ಕೆ ಹಣ ನೀಡುವುದನ್ನು ನಿಲ್ಲಿಸಿದೆ ಎಂದು ದೆಹಲಿ ಸಿಎಂ ದೂರಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 146ನೇ ಜಯಂತಿ ಅಂಗವಾಗಿ ರಾಜ್‌ಘಾಟ್‌ಗೆ ತೆರಳಿ ಗೌರವ ನಮನ ಸಲ್ಲಿಸಿದ ಬಳಿಕ ಕೇಜ್ರಿವಾಲ್ ಅವರು ಈ ಹೇಳಿಕೆ ನೀಡಿದ್ದಾರೆ.
ರಾಜ್‌ಘಾಟ್‌ಗೆ ಭೇಟಿ ನೀಡಿದ ಬಳಿಕ ಕೇಜ್ರಿವಾಲ್ ಅವರು ವಿಜಯ್‌ಘಾಟ್‌ಗೆ ತೆರಳಿ ಮಾಜಿ ಪ್ರಧಾನಿಗೂ ನಮನ ಸಲ್ಲಿಸಿದರು. ಬಳಿಕ ಸರಣಿ ಟ್ವೀಟ್ ಮಾಡಿದ ಕೇಜ್ರಿವಾಲ್, ಎನ್‌ಡಿಎ ಸರ್ಕಾರ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


