ದೇಶ

ದೇವಾಲಯ ಪ್ರವೇಶಿಸಲು ಯತ್ನಿಸಿದ ದಲಿತನ ಸಜೀವ ದಹನ

ಉತ್ತರ ಪ್ರದೇಶದ ಹಮೀರ್ ಪುರದಲ್ಲಿರುವ ದೇವಲಾಯವನ್ನು ಪ್ರವೇಶಿಸಲು ಯತ್ನಿಸಿದ ದಲಿತನೊಬ್ಬನ ಮೇಲೆ ಗಂಭೀರ ಹಲ್ಲೆ...

ದೇವಾಲಯ ಪ್ರವೇಶಿಸಲು ಯತ್ನಿಸಿದ ದಲಿತನ ಸಜೀವ ದಹನ
ಸಾಂದರ್ಭಿಕ ಚಿತ್ರ
Published On :

ಲಖನೌ: ಉತ್ತರ ಪ್ರದೇಶದ ಹಮೀರ್ ಪುರದಲ್ಲಿರುವ ದೇವಲಾಯವನ್ನು ಪ್ರವೇಶಿಸಲು ಯತ್ನಿಸಿದ ದಲಿತನೊಬ್ಬನ ಮೇಲೆ ಗಂಭೀರ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.

ಕಾನ್ಪುರದಿಂದ 140 ಕಿ.ಮೀ. ದೂರದಲ್ಲಿರುವ ಹಮೀರ್ ಪುರದ ಬಿಲ್ಗಾಂವ್ ನಲ್ಲಿ ಮೈದಾನಿಬಾಬ ದೇವಸ್ಥಾನಕ್ಕೆ 90ರ ಹರೆಯದ ಚಿಮ್ಮ ಮತ್ತು ಅವರ ಪತ್ನಿ ಹಾಗೂ ಮಗ ದುರ್ಜನ್ ನೊಂದಿಗೆ ಹೋಗಿದ್ದರು. ಆಗ ಅವರನ್ನು ದೇವಸ್ಥಾನದ ಸಂಜಯ್ ತಿವಾರಿ ಎಂಬಾತ ತಡೆದು ನಿಲ್ಲಿಸಿದ್ದಾನೆ. ಆದರೆ ದಲಿತ ಕುಟುಂಬವು ದೇವಸ್ಥಾನ ಪ್ರವೇಶಿಸಲು ಯತ್ನಿಸಿದಾಗ ಏಕಾಏಕಿ ದಾಳಿ ನಡೆಸಿದ ಆರೋಪಿಯು, ಕೊಡಲಿಯಿಂದ ಹಲ್ಲೆ ನಡೆಸಿದ್ದು, ನಂತರ ವೃದ್ಧನ ಮೇಲೆ ಬೆಂಕಿ ಹಚ್ಚಿದಾನೆಂದು ತಿಳಿದು ಬಂದಿದೆ.

ಈ ಘಟನೆ ನಡೆಯುವ ವೇಳೆ ದೇವಸ್ಥಾನದಲ್ಲಿ ಇತರ ಭಕ್ತರೂ ಇದ್ದರು. ಚಿಮ್ಮ ಮತ್ತು ಅವರ ಕುಟುಂಬವನ್ನು ದೇವಸ್ಥಾನ ಪ್ರವೇಶಿಸದಂತೆ ತಿವಾರಿ ತಡೆದಿದ್ದನು.ತನ್ನ ಮಾತು ಕೇಳದೆ ದೇವಸ್ಥಾನ ಪ್ರವೇಶಿಸಲು ಯತ್ನಿಸಿದ ದಲಿತ ಕುಟುಂಬವನ್ನು ಕಂಡ ತಿವಾರಿ ಕೋಪೊದ್ರಿಕ್ತನಾಗಿ ವೃದ್ಧನ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದನು. ನಂತರ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದನು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ಆರೋಪಿ ತಿವಾರಿ ಮತ್ತು ಆತನ ಇಬ್ಬರು ಸಹಚರರ ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.