ಲಾಲ್ ಬಹದ್ದೂರ್ ಶಾಸ್ತ್ರೀಗೆ ನಮನ ಸಲ್ಲಿಸಿದ ಮೋದಿ
ದೇಶದೆಲ್ಲೆಡೆ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರ 111ನೇ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಾಲ್ ಬಹದ್ದೂರ್ ಶಾಸ್ತ್ರೀಯವರಿಗೆ ಗೌರವ ನಮನ...

ನವದೆಹಲಿ: ದೇಶದೆಲ್ಲೆಡೆ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರ 111ನೇ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಾಲ್ ಬಹದ್ದೂರ್ ಶಾಸ್ತ್ರೀಯವರಿಗೆ ಗೌರವ ನಮನವನ್ನು ಸೂಚಿಸಿದ್ದು,ಶಾಸ್ತ್ರೀಯವರ 'ಜೈವಾನ್ ಜೈ ಕಿಸಾನ್' ನಮ್ಮೆಲ್ಲರಿಗೂ ಪ್ರೇರಣೆ ಎಂದು ಶುಕ್ರವಾರ ಹೇಳಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಲಾಲ್ ಬಹದ್ದೂರ್ ಶಾಸ್ತ್ರಿಯವರು ದೇಶದ ಹೆಮ್ಮೆಯ ಪುತ್ರ. ಅವರಿಗೆ ಜನ್ಮದಿನಕ್ಕೆ ನನ್ನ ನಮನಗಳು. ಶಾಸ್ತ್ರೀಯವರು ತಮ್ಮ ಸರಳ ಹಾಗೂ ಸಮಗ್ರತೆಯಿಂದ ಎಲ್ಲರ ಮನವನ್ನು ಗೆದ್ದಿದ್ದರು. ಕಠಿಣ ಸಂದರ್ಭಗಳಲ್ಲಿ ಅವರು ನೀಡಿದ್ದ ನಾಯಕತ್ವ ನಮ್ಮ ದೇಶದ ದೊಡ್ಡ ಆಸ್ದಿಯಾಗಿದೆ. ಇಂದು ರೈತರಿಗಾಗಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಲಾಲ್ ಬಹದ್ದೂರ್ ಅವರ 'ಜೈವಾನ್ ಜೈ ಕಿಸಾನ್; ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ.
ಲಾಲ್ ಬಹದ್ದೂರ್ ಶಾಸ್ತ್ರೀಯವರು ಭಾರತದ ಎರಡನೇ ಪ್ರಧಾನಿಯಾಗಿದ್ದು, ಜೂನ್ 9, 1964 ರಿಂದ ಜನವರಿ 11, 1966ರ ಅವಧಿಯವರೆಗೂ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


