ವಿಶೇಷ ಪ್ಯಾಕೇಜ್ ತಿರಸ್ಕರಿಸುವ ಹಕ್ಕು ನಿತೀಶ್ ಗಿಲ್ಲ: ಅಮಿತ್ ಶಾ
ಪ್ರಧಾನಮಂತ್ರಿ ನರೇಂದ್ರ ಮೋದಿ ನಂತರ ಇದೀಗ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿಗೆ ಮುಂದಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಉತ್ತಮ ರಾಜ್ಯಕ್ಕಾಗಿ ಬಿಹಾರ ರಾಜ್ಯಕ್ಕೆ...

ಬಿಹಾರ: ಪ್ರಧಾನಮಂತ್ರಿ ನರೇಂದ್ರ ಮೋದಿ ನಂತರ ಇದೀಗ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿಗೆ ಮುಂದಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಉತ್ತಮ ರಾಜ್ಯಕ್ಕಾಗಿ ಬಿಹಾರ ರಾಜ್ಯಕ್ಕೆ ಪ್ರಧಾನಿ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ತಿರಸ್ಕರಿಸುವ ಹಕ್ಕು ನಿತೀಶ್ ಕುಮಾರ್ ಅವರಿಗಿಲ್ಲ ಎಂದು ಹೇಳಿದ್ದಾರೆ.
ಗರ್ದಾನಿಬಾಗ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಬಿಹಾರ ರಾಜ್ಯದ ಯುವಕರು, ಮಹಿಳೆಯರು ಹಾಗೂ ರೈತರಿಗೆ ಸಹಾಯವಾಗಲೆಂದು ಪ್ರಧಾನಿಯವರು 1.25 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ವೊಂದನ್ನು ಘೋಷಿಸಿದ್ದರು. ಪ್ರಧಾನಿಯಾಗುವ ಕನಸು ಕಾಣುತ್ತಿರುವವರು ನಿತೀಶ್ ಕುಮಾರ್ ಅವರು ಸೊಕ್ಕಿನಿಂದ ನಡೆಯುತ್ತಿದ್ದಾರೆ. ಒಂದು ರಾಜ್ಯದ ಕಲ್ಯಾಣಕ್ಕಾಗಿ ಘೋಷಣೆಯಾಗಿರುವ ವಿಶೇಷ ಪ್ಯಾಕೇಜ್ ನ್ನು ತಿರಸ್ಕರಿಸುವ ಹಕ್ಕು ಅವರಿಗಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಜೆಪಿಯ ಯಶಸ್ವಿ ಯೋಜನೆಗಳ ಕುರಿತು ಮಾತನಾಡಿರುವ ಅವರು, ಬಿಜೆಪಿ ಆಡಳಿತದ ಮಧ್ಯಪ್ರದೇಶ, ಗುಜರಾತ್ ಹಾಗೂ ಚಂಡೀಗಢ ರಾಜ್ಯಗಳು ಇದೀಗ ಸಾಕಷ್ಟು ಅಭಿವೃದ್ಧಿ ಕಂಡಿದೆ. ಹಾಗಾಗಿಯೇ ಈ ರಾಜ್ಯಗಳಲ್ಲಿ ಪ್ರತೀ ಬಾರಿ ನಡೆಯುವ ಚುನಾವಣೆಯಲ್ಲಿಯೂ ಬಿಜೆಪಿ ಜಯಗಳಿಸುತ್ತಿರುವುದು ಎಂದು ಹೇಳಿದ್ದಾರೆ.
ಈ ಹಿಂದಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ನಿತೀಶ್ ಕುಮಾರ್ ದುರಹಂಕಾರಿ ವ್ಯಕ್ತಿಯಾಗಿದ್ದಾರೆ, ಅಂತಹ ವ್ಯಕ್ತಿಗೆ ಮತ ಹಾಕುವುದು ವ್ಯರ್ಥವಾದಂತೆ. ಆದ್ದರಿಂದ, ಬಿಹಾರ್ ರಾಜ್ಯದ ಸಂಪೂರ್ಣ ಅಭಿವೃದ್ಧಿಗಾಗಿ ಬಿಜೆಪಿ ಮೈತ್ರಿಕೂಟಕ್ಕೆ ಮತ ನೀಡಿ. ಕೆಲ ನಾಯಕರು ಕೇಂದ್ರ ಸರಕಾರ ಘೋಷಿಸಿದ ವಿಶೇಷ ಪ್ಯಾಕೇಜ್ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.
ಬಿಹಾರ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಬರುತ್ತದೆಯೇ ಅಥವಾ ಇಲ್ಲವೋ ಎನ್ನುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸರಕಾರದಿಂದ ಒಂದು ರೂಪಾಯಿಯಾದರೂ ಬಂದಿದೆಯೇ. ನಾನು ಕೇಂದ್ರ ಸರಕಾರದಿಂದ 1.65 ಲಕ್ಷ ರೂಪಾಯಿಗಳ ಹಣವನ್ನು ಬಿಡುಗಡೆಗೊಳಿಸಿದರೂ ಅಹಂಕಾರಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅದನ್ನು ಕೇಂದ್ರ ಸರಕಾರಕ್ಕೆ ಮರಳಿಸುತ್ತಾರೆ. ಅವರ ಮೇಲೆ ನನಗೆ ನಂಬಿಕೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


