ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಪತ್ರಕರ್ತನ ಹತ್ಯೆ
ಉತ್ತರ ಪ್ರದೇಶ ಪತ್ರಕರ್ತರಿಗೆ ಸುರಕ್ಷಿತ ಪ್ರದೇಶವಲ್ಲ ಎಂಬುದು ಸಾಬೀತಾಗುತ್ತಿದೆ. ಕೆಲವು ತಿಂಗಳುಗಳ ಹಿಂದಷ್ಟೇ ಉತ್ತರ ಪ್ರದೇಶದಲ್ಲಿ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು...

ಉತ್ತರ ಪ್ರದೇಶ: ಉತ್ತರ ಪ್ರದೇಶ ಪತ್ರಕರ್ತರಿಗೆ ಸುರಕ್ಷಿತ ಪ್ರದೇಶವಲ್ಲ ಎಂಬುದು ಸಾಬೀತಾಗುತ್ತಿದೆ. ಕೆಲವು ತಿಂಗಳುಗಳ ಹಿಂದಷ್ಟೇ ಉತ್ತರ ಪ್ರದೇಶದಲ್ಲಿ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ ಇದೇ ಸಾಲಿಗೆ ಮತ್ತೊಂದು ಘಟನೆಯೊಂದು ಸೇರಿದ್ದು, ಇಲ್ಲಿನ ಧಾನ್ಪುರ ಪ್ರದೇಶದಲ್ಲಿ ಪತ್ರಕರ್ತನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ.
ಹೇಮಂತ್ ಸಿಂಗ್ ಯಾದವ್ (45) ಹತ್ಯೆಗೀಡಾದ ಪತ್ರಕರ್ತ. ಖಾಸಗಿ ಮಾಧ್ಯಮವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ. ನಿನ್ನೆ ರಾತ್ರಿ ಜಾನುವಾರುಗಳಿಗೆ ಆಹಾರ ತೆಗೆದುಕೊಂಡು ಕಮಲಾಪುರದಲ್ಲಿರುವ ನಿವಾಸಕ್ಕೆ ದ್ವಿಚಕ್ರ ವಾಹನದ ಮೂಲಕ ತೆರಳುತ್ತಿದ್ದಾಗ ಅನಾಮಿಕ ವ್ಯಕ್ತಿಗಳು ಅವರ ಮೇಲೆ ದಾಳಿ ಮಾಡಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹೇಮಂತ್ ಯಾದವ್ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಆತನೊಂದಿಗೆ ಮಾತುಕತೆಗಿಳಿದಿದ್ದರು. ಸ್ವಲ್ಪ ಸಮಯದ ಬಳಿಕ ಆತನ ಮೇಲೆ ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ನಂತರ ನಂತರ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ಹಾರಿಸದ ಶಬ್ಧ ಕೇಳುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಘಟನಾ ಸ್ಥಳದತ್ತ ದಾವಿಸಿದ್ದಾರೆ. ಇದನ್ನು ಕಂಡ ದಾಳಿಕೋರರು ಸ್ಥಳದಿಂದ ಕಾಲ್ಕಿತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರ ಬಳಿ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಧಾನಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


