ದೇಶ

ಪಶ್ಚಿಮ ಬಂಗಾಳ ಸರ್ಕಾರ ಜನರ ವಿರುದ್ಧ ಯುದ್ಧ ಘೋಷಿಸಿದೆ: ಸಿಪಿಐ(ಎಂ)

ಪಶ್ಚಿಮ ಬಂಗಾಳ ಸರ್ಕಾರ, ಮತದಾನದ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಜನರ ವಿರುದ್ಧ ಯುದ್ಧ ಘೋಷಣೆ ಮಾಡಿದೆ ಎಂದು ಸಿಪಿಐ-ಎಂ ಆರೋಪಿಸಿದೆ.

ಪಶ್ಚಿಮ ಬಂಗಾಳ ಸರ್ಕಾರ ಜನರ ವಿರುದ್ಧ ಯುದ್ಧ ಘೋಷಿಸಿದೆ: ಸಿಪಿಐ(ಎಂ)
ಸಿಪಿಐ-ಎಂ
Published On :

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರ, ಮತದಾನದ ಹಕ್ಕನ್ನು ಕಸಿದುಕೊಳ್ಳುವ ಮೂಲಕ  ಜನರ ವಿರುದ್ಧ ಯುದ್ಧ ಘೋಷಣೆ ಮಾಡಿದೆ ಎಂದು ಸಿಪಿಐ-ಎಂ ಆರೋಪಿಸಿದೆ.
ಮುರ್ಶಿದಾಬಾದ್ ಹರಿಹರ್ ಪಾರದ ಸ್ಥಳಿಯಾಡಳಿತ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾದ ಪರಿಣಾಮ, ಮತದಾರರಿಗೆ ಮತಗಟ್ಟೆ ಪ್ರವೇಶಿಸಲು ಅವಕಾಶ ನೀಡಿರಲಿಲ್ಲ, ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಪಿಐ(ಎಂ) ಸರ್ಕಾರ ಜನರ ವಿರುದ್ಧ ಯುದ್ಧ ಘೋಷಣೆ ಮಾಡಿದೆ ಎಂದು ಆರೋಪಿಸಿದೆ.
ಸರ್ಕಾರದ ಕ್ರಮವನ್ನು ಖಂಡಿಸಿ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿರುವ ಸಿಪಿಐಎಂ, ಪ್ರಜಾಪ್ರಭುತ್ವವನ್ನು ಬೆಂಬಲಿಸುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಆಹ್ವಾನ ನೀಡಿದೆ. ಜನರ ಮತದಾನದ ಹಕ್ಕನ್ನು ಪಶ್ಚಿಮ ಬಂಗಾಳ ಸರ್ಕಾರ ಬಲವಂತವಾಗಿ ಕಸಿದುಕೊಳ್ಳಲು ಯತ್ನಿಸಿದೆ ಅ.5 ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸುರ್ಜಯ್ ಕಾಂತ್ ಮಿಶ್ರಾ ಹೇಳಿದ್ದಾರೆ.
ನಕಲಿ ಮತದಾನ ನಡೆದಿರುವ ಆರೋಪವೂ ಕೇಳಿಬಂದಿದ್ದು ಮರು ಮತದಾನ ನಡೆಸಬೇಕು ಎಂದು ಮಿಶ್ರಾ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.