ಅಖಿಲೇಶ್ ಸರ್ಕಾರದಿಂದ ಗೋ ಹಂತಕರ ರಕ್ಷಣೆ: ಸಂಗೀತ್ ಸೋಮ್
ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಗೋ ಹಂತಕರನ್ನು ರಕ್ಷಿಸಲು ಮುಂದಾಗಿದೆ ಎಂದು ಬಿಜೆಪಿ ಮುಖಂಡ ಸಂಗೀತ್ ಸೋಮ್ ಆರೋಪಿಸಿದ್ದಾರೆ.

ದಾದ್ರಿ: ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಗೋ ಹಂತಕರನ್ನು ರಕ್ಷಿಸಲು ಮುಂದಾಗಿದೆ ಎಂದು ಬಿಜೆಪಿ ಮುಖಂಡ ಸಂಗೀತ್ ಸೋಮ್ ಆರೋಪಿಸಿದ್ದಾರೆ.
2013 ರ ಮುಜಾಫರ್ ನಗರ ಕೋಮು ಗಲಭೆಯ ಪ್ರಮುಖ ಆರೋಪಿಯಾಗಿರುವ ಸಂಗೀತ್ ಸೋಮ್ ಇಂದು ದಾದ್ರಿಗೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು ಪ್ರಕರಣದಲ್ಲಿ ಆರೋಪಿಗಳೆಂದು ಪರಿಗಣಿಸಿ ಬಂಧಿಸಿರುವವರ ಬಿಡುಗಡೆಗೆ ಪ್ರಯತ್ನ ನಡೆಸಲಾಗುತ್ತಿದೆ, ಶೀಘ್ರವೇ ಅವರಿಗೆ ಜಾಮೀನು ಸಿಗಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.
ಉತ್ತರ ಪ್ರದೇಶ ಸರ್ಕಾರ ಏಕಪಕ್ಷಿಯವಾಗಿ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಅಲ್ಪ ಸಂಖ್ಯಾತರನ್ನು ಓಲೈಸಲು ಅಖಿಲೇಶ್ ಯಾದವ್ ಸರ್ಕಾರ ಶ್ರಮಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಅವರು ತನಿಖಾ ವರದಿ ಬಂದ ನಂತರ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


