ದಾದ್ರಿ ಪ್ರಕರಣ: ಕೊನೆಗೂ ಮೌನ ಮುರಿದ ರಾಜನಾಥ್ ಸಿಂಗ್
ಗೋ ಹತ್ಯೆ ಹಾಗೂ ಗೋ ಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣ ದೇಶದಾದ್ಯಂತ ಹಲವು ವಿವಾದಗಳನ್ನೇ ಸೃಷ್ಟಿಸುತ್ತಿದ್ದರೂ ಪ್ರಕರಣ ಸಂಬಂಧ ತಮ್ಮ ಮೌನವನ್ನು ಮುಂದುವರೆಸಿದ್ದ ಕೇಂದ್ರ ಗೃಹ ಸಚಿವ ರಾಜನಾಥಸಿಂಗ್ ಅವರು ಇದೀಗ ತಮ್ಮ ಮೌನವನ್ನು...

ದಾದ್ರಿ: ಗೋ ಹತ್ಯೆ ಹಾಗೂ ಗೋ ಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣ ದೇಶದಾದ್ಯಂತ ಹಲವು ವಿವಾದಗಳನ್ನೇ ಸೃಷ್ಟಿಸುತ್ತಿದ್ದರೂ ಪ್ರಕರಣ ಸಂಬಂಧ ತಮ್ಮ ಮೌನವನ್ನು ಮುಂದುವರೆಸಿದ್ದ ಕೇಂದ್ರ ಗೃಹ ಸಚಿವ ರಾಜನಾಥಸಿಂಗ್ ಅವರು ಇದೀಗ ತಮ್ಮ ಮೌನವನ್ನು ಮುರಿದಿದ್ದು, ದಾದ್ರಿ ಪ್ರಕರಣಕ್ಕೆ ರಾಜಕೀಯ ಬಣ್ಣ ನೀಡಬೇಡಿ ಎಂದು ಭಾನುವಾರ ಹೇಳಿದ್ದಾರೆ.
ದಾದ್ರಿ ಪ್ರಕರಣ ಸಂಬಂಧ ಇಂದು ಪ್ರತಿಕ್ರಿಯೆ ನೀಡಿರುವ ಅವರು, ದಾದ್ರಿ ಪ್ರಕರಣ ನಡೆದಿದ್ದು ದುರದೃಷ್ಟಕರ. ಆದರೆ, ಇದನ್ನೇ ಗಾಳವಾಗಿಟ್ಟುಕೊಂಡು ಪ್ರಕರಣಕ್ಕೆ ಕೋಮು ಹಾಗೂ ರಾಜಕೀಯ ಬಣ್ಣ ನೀಡುವ ಪ್ರಯತ್ನ ನಡೆಯಬಾರದು ಎಂದು ಹೇಳಿದ್ದಾರೆ.
ಉತ್ತರಪ್ರದೇಶದ ದಾದ್ರಿ ಬಳಿಯ ಬಿಶಾದಾ ಗ್ರಾಮದಲ್ಲಿರುವ ಮುಸ್ಲಿಂ ಕುಟುಂಬವೊಂದು ಮನೆಯಲ್ಲಿ ಗೋಮಾಂಸವಿಟ್ಟುಕೊಂಡಿದ್ದಾರೆ ಎಂಬ ಶಂಕೆ ಹಿನ್ನೆಲೆ ಮನೆಗೆ ನುಗ್ಗಿದ ಉದ್ರಿಕ್ತ ಗುಂಪೊಂದು ಮೊಹಮ್ಮದ್ ಇಕ್ಲಾಖ್ ಹತ್ಯೆ ಮಾಡಿತ್ತು. ಈ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಈ ನಡುವೆ ಉತ್ತರ ಪ್ರದೇಶ ಪೊಲೀಸರು ಶಿವಂ ಮತ್ತು ವಿಶಾಲ್ ಎಂಬ ಪ್ರಮುಖ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


