ಕುಪ್ವಾರ ಎನ್‌ಕೌಂಟರ್: ಓರ್ವ ಉಗ್ರನ ಹತ್ಯೆ, 4 ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ ಉಗ್ರರೊಂದಿಗೆ ನಡೆದ ಭಾರಿ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದ್ದು,..

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ ಉಗ್ರರೊಂದಿಗೆ ನಡೆದ ಭಾರಿ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಕನಿಷ್ಠ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಕುಪ್ವಾರ ಜಿಲ್ಲೆಯ ಹಫ್ರಾಡಾ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಕುಪ್ವಾರ ಜಿಲ್ಲೆಯ ದೊರ್ಪೊರಾ ಗ್ರಾಮದಲ್ಲಿ ಒರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕುಪ್ವಾರ ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಉಗ್ರರೊಂದಿಗೆ ಗುಂಡಿನ ಕಾಳ ನಡೆಯುತ್ತಿದೆ.
ನಿನ್ನೆ ಅಥವಾ ಇದಕ್ಕೂ ಮೊದಲು ಉಗ್ರರು ಅಕ್ರಮವಾಗಿ ಕಾಶ್ಮೀರವನ್ನು ಪ್ರವೇಶಿಸಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಉಗ್ರರೊಂದಿಗೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


