ಲಾಲೂಗಿಂತ ಓವೈಸಿ ದೊಡ್ಡ ಎದುರಾಳಿ: ಅಮಿತ್ ಶಾ
ಬಿಹಾರ ಚುನಾವಣೆಯಲ್ಲಿ ಜೆಡಿಯು ಮುಖಂಡ ಲಾಲೂ ಪ್ರಸಾದ್ ಯಾದವ್ ಗಿಂತ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ದೊಡ್ಡ ಎದುರಾಳಿಯಾಗಿ ಪರಿಣಮಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಮಿತ್ ಶಾ ಅವರು ಸೋಮವಾರ ಹೇಳಿದ್ದಾರೆ...

ನವದೆಹಲಿ: ಬಿಹಾರ ಚುನಾವಣೆಯಲ್ಲಿ ಜೆಡಿಯು ಮುಖಂಡ ಲಾಲೂ ಪ್ರಸಾದ್ ಯಾದವ್ ಗಿಂತ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ದೊಡ್ಡ ಎದುರಾಳಿಯಾಗಿ ಪರಿಣಮಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸೋಮವಾರ ಹೇಳಿದ್ದಾರೆ.
ಬಿಹಾರ ಚುನಾವಣೆ ಕುರಿತಂತೆ ಖಾಸಗಿ ಮಾಧ್ಯಮದ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಬಿಹಾರ ಜನತೆಗೆ ಅಭಿವೃದ್ಧಿ ಬಗ್ಗೆ ಇದೀಗ ಅರಿವು ಬಂದಿದ್ದು, ಮತ್ತೊಮ್ಮೆ ಕಾಡಿನ ರಾಜನಂತೆ ವರ್ತಿಸುವ ನಾಯಕರಿಗೆ ಮತ ಹಾಕುವುದಿಲ್ಲ ಎಂಬುದರ ಬಗ್ಗೆ ನಮಗೆ ನಂಬಿಕೆಯಿದೆ. ಬಿಹಾರದಲ್ಲಿ ಎನ್ ಡಿಎ ಸರ್ಕಾರ ಬಹುಮತದಿಂದ ಜಯ ಸಾಧಿಸಲಿದ್ದು, ಮುಂದಿನ ದಿನಗಳಲ್ಲಿ ಬಿಹಾರದಲ್ಲಿ ಬಿಜೆಪಿ ಪಕ್ಷ ಸರ್ಕಾರ ನಡೆಸಲಿದೆ. ಪ್ರಸ್ತುತ ಪಕ್ಷದ ಎಲ್ಲಾ ನಾಯಕರು ಬಿಹಾರ ಜನತೆಯನ್ನು ಭೇಟಿ ಮಾಡಿದ್ದು, ಅವರಿಗೆ ಸಾಕಷ್ಟು ಭರವಸೆಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಕಿಡಿಕಾರಿದ ಅವರು, ನಿತೀಶ್ ಇದೀಗ ಮೈತ್ರಿಯಾಗಲು ಒಲವು ತೋರಿಸುತ್ತಿರುವುದೂ ಸಹ ಅಧಿಕಾರದ ಮೇಲಿರುವ ದುರಾಸೆಯಿಂದ. 20 ವರ್ಷಗಳ ಹಿಂದೆ ಲಾಲೂ ನಿತೀಶ್ ವಿರುದ್ಧ ಇದ್ದವರು. ಈ ಹಿಂದೆ ನಿತೀಶ್ ಬಿಜೆಪಿ ಪಕ್ಷದಲ್ಲಿದ್ದರು. ಅವರಿಗೆ ಈ ಹಿಂದಿದ್ದ ಪಕ್ಷದ ಬಗ್ಗೆ ಸ್ವಲ್ಪವಾದರೂ ಗೌರವವಿದ್ದಿದ್ದರೆ, ಲಾಲೂ ಈ ಹಿಂದೆ ನಡೆದುಕೊಂಡಿದ್ದನ್ನೆಲ್ಲ ನೆನಪು ಮಾಡಿಕೊಂಡಿದ್ದರೆ ಅವರು ಈ ರೀತಿಯ ಕೆಲಸಕ್ಕೆ ಕೈ ಹಾಕುತ್ತಿರಲಿಲ್ಲ.
ಬಿಜೆಪಿ ನೇತೃತ್ವದ ಸರ್ಕಾರವಿರುವ ರಾಜ್ಯಗಳನ್ನು ಗಮನಿಸಿದರೆ ನಮ್ಮ ಶ್ರಮ ಎಲ್ಲರಿಗೂ ಅರ್ಥವಾಗುತ್ತದೆ. ಬಿಜೆಪಿ ನೇತೃತ್ವದ ರಾಜ್ಯಗಳು ಇದೀಗ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಾಗಿ ಹೊರಹೊಮ್ಮುತ್ತಿವೆ. 24 ಗಂಟೆ ವಿದ್ಯುತ್, ನೀರು, ಶಾಲೆ ಹಾಗೂ ಶಿಕ್ಷಕರು ಹೀಗೆ ನಾನಾ ರೀತಿಯ ಸೌಲಭ್ಯಗಳು ಆ ರಾಜ್ಯಗಳಿಗೆ ದೊರೆಯುತ್ತಿವೆ. ಬಿಹಾರ ರಾಜ್ಯ ಇದೀಗ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಇದೆ. ನಮ್ಮ ಸರ್ಕಾರ ಬಿಹಾರ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸಲು ಮುಂದಾಗಿದೆ. ಬಿಹಾರ ರಾಜ್ಯದಲ್ಲಿ ಎನ್ ಡಿಎ ಸರ್ಕಾರ ಗೆದ್ದಿದ್ದೇ ಆದರೆ ಖಂಡಿತವಾಗಿಯೂ ಬಿಹಾರ ಅತೀ ವೇಗವಾಗಿ ಅಭಿವೃದ್ಧಿ ಕಾಣಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


