ದೇಶ

ಶೀನಾ ಹತ್ಯೆ ಪ್ರಕರಣ: ಇಂದ್ರಾಣಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿಗಳಾದ ಇಂದ್ರಾಣಿ ಮುಖರ್ಜಿ, ಆಕೆಯ ಮಾಜಿ ಪತಿ ಸಂಜೀವ್ ಖನ್ನಾ ಹಾಗೂ ಚಾಲಕ ಶ್ಯಾಮ್ ರೈ ನ್ಯಾಯಾಂಗ ಬಂಧನ...

ಶೀನಾ ಹತ್ಯೆ ಪ್ರಕರಣ: ಇಂದ್ರಾಣಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಇಂದ್ರಾಣಿ ಮುಖರ್ಜಿ
Published On :

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿಗಳಾದ ಇಂದ್ರಾಣಿ ಮುಖರ್ಜಿ, ಆಕೆಯ ಮಾಜಿ ಪತಿ ಸಂಜೀವ್ ಖನ್ನಾ ಹಾಗೂ ಚಾಲಕ ಶ್ಯಾಮ್ ರೈ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 19ರ ವರೆಗೆ ವಿಸ್ತರಿಸಲಾಗಿದೆ.

ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಇಂದು ಆರೋಪಿಗಳನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರು ಪಡಿಸಿದರು.

ಪ್ರಕರಣವನ್ನು ಇತ್ತೀಚೆಗಷ್ಟೇ ಸಿಬಿಐಗೆ ವರ್ಗಾಯಿಸಲಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಆರೋಪಿಗಳ ಬಂಧನ ಅವಧಿಯನ್ನು ವಿಸ್ತರಿಸಬೇಕು ಎಂದು ಸಿಬಿಐ ಪರ ವಕೀಲರು ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಆರೋಪಿಗಳ ಬಂಧನ ಅವಧಿಯನ್ನು ಎರಡು ವಾರಗಳ ಕಾಲ ವಿಸ್ತರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.