ನಕ್ಸಲರಿಂದ 3 ಟಿಡಿಪಿ ನಾಯಕರ ಅಪಹರಣ
ತೆಲುಗು ದೇಶಂ ಪಕ್ಷದ ಮೂವರು ನಾಯಕರನ್ನು ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಕ್ಸಲೀಯರು ಬಂಧಿಸಿದ್ದಾರೆ ಎಂದು ಪೊಲೀಸರು...

ಹೈದರಾಬಾದ್: ತೆಲುಗು ದೇಶಂ ಪಕ್ಷದ ಮೂವರು ನಾಯಕರನ್ನು ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಕ್ಸಲೀಯರು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕ್ಸಲೀಯರು ತಮ್ಮ ಜಾಲ ವ್ಯವಸ್ಥೆಯ ಮೂಲಕ ಟಿಡಿಪಿ ನಾಯಕರಿಗೆ ಕರೆ ಮಾಡಿ ವಿಶಾಖಪಟ್ಟಣಂ ಜಿಲ್ಲೆಯ ದಾರ್ಕೊಂಡ ಪ್ರದೇಶದಲ್ಲಿ ನಿನ್ನೆ ಅಪರಾಹ್ನ ಭೇಟಿ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಇವರು ಹೋದಾಗ ಬಂಧಿಸಿದ್ದಾರೆ ಎಂದು ವಿಶಾಖಪಟ್ಟಣಂನ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಪ್ರವೀಣ್ ತಿಳಿಸಿದ್ದಾರೆ.
ಬಂಧಿತರಿಗೆ ಯಾವುದೇ ಹಾನಿ ಮಾಡುವುದಿಲ್ಲ ಎಂದು ನಕ್ಸಲೀಯರು ಭರವಸೆ ನೀಡಿದ್ದಾರೆ ಎಂದು ಅವರನ್ನು ಭೇಟಿ ಮಾಡಿರುವ ಟಿಡಿಪಿ ಮುಖಂಡರಾದ ಎಂ.ಬಾಲಯ್ಯ, ಮಹೇಶ್ ಮತ್ತು ವಿ.ಬಾಲಯ್ಯ ತಿಳಿಸಿದ್ದಾರೆ. ಪೊಲೀಸರಿಗೆ ಕಳೆದ ರಾತ್ರಿ ಮಾಹಿತಿ ಸಿಕ್ಕಿದೆ.
ನಾವು ಮಾಹಿತಿ ಕಲೆ ಹಾಕುತ್ತಿದ್ದೇವೆ. ಮಾವೋವಾದಿಗಳು ಅವರನ್ನು ಪೂರ್ವ ಗೋದಾವರಿ ಜಿಲ್ಲೆಯ ದಟ್ಟ ಅರಣ್ಯಕ್ಕೆ ಕರೆದೊಯ್ಯುವ ಸಾಧ್ಯತೆಯಿದೆ. ಮಾವೋವಾದಿಗಳ ಬೇಡಿಕೆಗಳೇನು ಎಂಬುದು ತಿಳಿಯಬೇಕಾಗಿದೆ ಎಂದು ಪ್ರವೀಣ್ ಹೇಳಿದ್ದಾರೆ.
ಗೋದಾವರಿ ಅರಣ್ಯದಲ್ಲಿ ಬಾಕ್ಸೈಟ್ ಗಣಿಗಾರಿಕೆಯನ್ನು ವಿರೋಧಿಸಿ ಟಿಡಿಪಿ ಮುಖಂಡರನ್ನು ನಕ್ಸಲೀಯರು ಬಂಧಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


