ದೇಶ

ಪ್ರಧಾನಿ ಅವಹೇಳನ: ಎಂಐಎಂ ಶಾಸಕ ಒವೈಸಿ ವಿರುದ್ಧ ಬಂಧನ ವಾರಂಟ್

ಬಿಹಾರ ವಿಧಾನಸಭಾ ಚುನಾವಣೆ ರ್ಯಾಲಿ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತೆಲಂಗಾಣದ ಎಂಐಎಂ ಶಾಸಕ...

ಪ್ರಧಾನಿ ಅವಹೇಳನ: ಎಂಐಎಂ ಶಾಸಕ ಒವೈಸಿ ವಿರುದ್ಧ ಬಂಧನ ವಾರಂಟ್
ಅಕ್ಬರುದ್ದೀನ್ ಒವೈಸಿ
Published On :

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ರ್ಯಾಲಿ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತೆಲಂಗಾಣದ ಎಂಐಎಂ ಶಾಸಕ ಅಕ್ಬರುದ್ದೀನ್ ಒವೈಸಿ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಲಾಗಿದೆ.

ಬಿಹಾರದ ಸೀಮಾಂಚಲ ಪ್ರದೇಶದ 20 ವಿಧಾಸಭಾ ಕ್ಷೇತ್ರಗಳಲ್ಲಿ ಎಂಐಎಂ ಸ್ಪರ್ಧಿಸುತ್ತಿದ್ದು, ಒವೈಸಿ ಕಳೆದ ಭಾನುವಾರ ಕಿಶನ್‌ಗಂಜ್ ಜಿಲ್ಲೆಯಲ್ಲಿ ಸಾರ್ವಜನ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದರು. ಈ ಸಂಬಂಧ ಒವೈಸಿ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿತ್ತು.

ಒವೈಸಿ ಭಾಷಣದ ವಿಡಿಯೋ ತುಣುಕುಗಳನ್ನು ಪರಿಶೀಲಿಸಿದ ಪೊಲೀಸರು, ಇಂದು ಎಂಐಎಂ ನಾಯಕನ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.