ವಾರಾಣಸಿ: ಕಾಂಗ್ರೆಸ್ ಶಾಸಕ ಸೆರೆ
ಪ್ರಧಾನಿ ಮೋದಿ ಕ್ಷೇತ್ರ ವಾರಾಣಸಿ ಯಲ್ಲಿ ಉಂಟಾಗಿದ್ದ ಹಿಂಸಾತ್ಮಕ ಘಟನೆಗಳಿಗೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಅಜಯ ರಾಯ್ ಸೇರಿ ಒಟ್ಟು 50 ಮಂದಿಯನ್ನು ಬಂಧಿಸಲಾಗಿದೆ...

Published On :
ವಾರಾಣಸಿ: ಪ್ರಧಾನಿ ಮೋದಿ ಕ್ಷೇತ್ರ ವಾರಾಣಸಿ ಯಲ್ಲಿ ಉಂಟಾಗಿದ್ದ ಹಿಂಸಾತ್ಮಕ ಘಟನೆಗಳಿಗೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಅಜಯ ರಾಯ್ ಸೇರಿ ಒಟ್ಟು 50 ಮಂದಿಯನ್ನು ಬಂಧಿಸಲಾಗಿದೆ.
ಸೋಮವಾರ ನಡೆದ ಹಿಂಸಾಕೃತ್ಯಗಳಲ್ಲಿ ರಾಯ್ ಪಾತ್ರ ಮುಖ್ಯವಾಗಿದೆ ಎಂದು ಆರೋಪಿಸಲಾ ಗಿದೆ. ಮಂಗಳವಾರ ಪರಿಸ್ಥಿತಿ ಶಾಂತವಾಗಿತ್ತು. ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು.
ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಗೋದೋವಿಲಾ ಪ್ರದೇಶದಲ್ಲಿ ಪ್ರವಾಸಿಗರ ಸಂಖ್ಯೆ ತೀರಾ ವಿರಳವಾಗಿತ್ತು. ವಾರಾಣಸಿಯ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲಾ ಪೊಲೀಸರ ಜತೆಗೆ ವಿಶೇಷ ಕಾರ್ಯಾಚರಣೆ ಪಡೆಯನ್ನೂ ನಿಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


