ದೇಶ

ಯುದ್ಧ ಕಾರ್ಯಾಚರಣೆಗಳಲ್ಲಿ ಮಹಿಳೆಯರ ನೇಮಕದ ಬಗ್ಗೆ ರಕ್ಷಣಾ ಸಚಿವರ ಸುಳಿವು

ಸಶಸ್ತ್ರಪಡೆಗಳ ಯುದ್ಧ ಕಾರ್ಯಾಚರಣೆಗಳಲ್ಲಿ ಮಹಿಳೆಯರನ್ನು ನೇಮಕ ಮಾಡುವುದಕ್ಕೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಬೆಂಬಲಿಸಿದ್ದಾರೆ.

ಯುದ್ಧ ಕಾರ್ಯಾಚರಣೆಗಳಲ್ಲಿ ಮಹಿಳೆಯರ ನೇಮಕದ ಬಗ್ಗೆ ರಕ್ಷಣಾ ಸಚಿವರ ಸುಳಿವು
ಮನೋಹರ್ ಪರಿಕ್ಕರ್(ಸಂಗ್ರಹ ಚಿತ್ರ)
Published On :

ನವದೆಹಲಿ: ಸಶಸ್ತ್ರಪಡೆಗಳ ಯುದ್ಧ ಕಾರ್ಯಾಚರಣೆಗಳಲ್ಲಿ ಮಹಿಳೆಯರನ್ನು ನೇಮಕ ಮಾಡುವುದಕ್ಕೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಬೆಂಬಲಿಸಿದ್ದಾರೆ. ಸಶಸ್ತ್ರ ಪಡೆಗಳ ಯುದ್ಧದಲ್ಲಿ ಮಹಿಳೆಯರಿಗೂ ಅವಕಾಶ ನಿಡುವ ಬಗ್ಗೆ  ಶೀಘ್ರವೇ ನೀತಿ ರೂಪಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮನೋಹರ್ ಪರಿಕ್ಕರ್ ಹೇಳಿದ್ದಾರೆ. 
ಮಹಿಳೆಯರಿಗೆ ಯುದ್ಧ ತರಬೇತಿ ಹಾಗೂ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕೆಲವು ತೊಡಕುಗಳಿವೆ ಆದರೆ ತಾತ್ವಿಕವಾಗಿ ಒಪ್ಪಿಗೆ ನೀಡದೇ ಇರುವುದಕ್ಕೆ ಯಾವುದೇ ಬಲವಾದ ಕಾರಣಗಳಿಲ್ಲ ಎಂದಿರುವ ಮನೋಹರ್ ಪರಿಕ್ಕರ್ ತರಬೇತಿ ವೇಳೆ ಮಹಿಳೆಯರಿಗೆ ಎದುರಾಗುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ನೀತಿ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಅ.8 ರಂದು ವಾಯುಪಡೆ ದಿನಾಚರಣೆಯಲ್ಲಿ ಮಾತನಾಡಿದ್ದ ವಾಯುಪಡೆ ಮುಖ್ಯಸ್ಥ ಅರೂಪ್ ರಹಾ, ಫೈಟರ್ ಜೆಟ್ ವಿಮಾನಗಳಿಗೆ ಮಹಿಳಾ ಪೈಲಟ್ ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದರು. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮನೋಹರ್ ಪರಿಕ್ಕರ್ ಸಶಸ್ತ್ರಪಡೆಗಳ ಯುದ್ಧದಲ್ಲೂ ಮಹಿಳೆಯರಿಗೆ ಅವಕಾಶ ನೀಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ. 
ಸಶಸ್ತ್ರಪಡೆಗಳು ಈಗಾಗಲೇ ಮಹಿಳೆಯರನ್ನು ಯುದ್ಧದ ವೇಳೆ ನಿಯೋಜಿಸುವುದಕ್ಕೆ ಸಂಬಂಧಿಸಿದಂತೆ ಶಿಫಾರಸ್ಸು ಮಾಡಿವೆ, ಅದನ್ನು ತಿರಸ್ಕರಿಸಲು ಬಲವಾದ ಕಾರಣವಿಲ್ಲ, ಆದರೆ ಮಹಿಳೆಯರಿಗೆ ಯಾವ ಜವಾಬ್ದಾರಿ ನೀಡಬೇಕೆಂಬುದನ್ನು ನಿರ್ಧರಿಸಬೇಕಿದೆ ಎಂದು ಪರಿಕ್ಕರ್ ಹೇಳಿದ್ದಾರೆ.  
ಕೆಲವು ಅಡೆತಡೆಗಳನ್ನು ಹೊರತುಪಡಿಸಿದರೆ ವಾಯುಪಡೆಯ ಕಾರ್ಯಾಚರಣೆಗಳಲ್ಲಿ ಮಹಿಳೆಯರಿಗೆ ಅವಕಾಶ ನೀಡಬಹುದಾಗಿದೆ ಎಂದು ಪರಿಕ್ಕರ್ ಹೇಳಿದ್ದರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.