ಜಗತ್ತಿನಾದ್ಯಂತ ತುಳಿತಕ್ಕೊಳಗಾದವರಿಗೆ ಅಂಬೇಡ್ಕರ್ ಸ್ಫೂರ್ತಿ: ಪ್ರಧಾನಿ ಮೋದಿ
ಭಾರತ ಸಂವಿಧಾನದ ಪ್ರಮುಖ ವಾಸ್ತುಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ತುಳಿತಕ್ಕೊಳಗಾದವರಿಗೆ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

Published On :
ಮುಂಬೈ: ಭಾರತ ಸಂವಿಧಾನದ ಪ್ರಮುಖ ವಾಸ್ತುಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ತುಳಿತಕ್ಕೊಳಗಾದವರಿಗೆ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಅಂಬೇಡ್ಕರ್ ಕೇವಲ ದಲಿತ ಸಮುದಾಯದ ನಾಯಕ ಅಲ್ಲ. ಪ್ರಪಂಚದಾದ್ಯಂತ ತುಳಿತಕ್ಕೊಳಗಾದವರಿಗೆ ಹಾಗೂ ಬಡವರಿಗೆ ಸ್ಫೂರ್ತಿದಾಯಕ. ಅಮೆರಿಕದ ಕಪ್ಪು ಜನಾಂಗದ ನಾಯಕ ಮಾರ್ಟಿನ್ ಲೂಥರ್ ಕಿಂಗ್ ಯಾರು ಎಂಬುದು ಪ್ರಪಂಚಕ್ಕೆ ಗೊತ್ತು. ಆದರೆ ನಮ್ಮ ದುರ್ದೈವದ ಸಂಗತಿ ಅಂಬೇಡ್ಕರ್ ಯಾರು ಎಂಬುದು ಅಷ್ಟಾಗಿ ಯಾರಿಗೂ ತಿಳಿದಿಲ್ಲ ಎಂದು ಮೋದಿ ಹೇಳಿದ್ದಾರೆ.
ಮುಂಬೈನ ದಾದರ್ ನ ಮಿಲ್ಸ್ ಕಾಂಪೌಂಡ್ ನಲ್ಲಿ ವಿಶ್ವದರ್ಜೆಯ ಅಂಬೇಡ್ಕರ್ ಸ್ಮಾರಕಕ್ಕೆ ಶಂಕುಸ್ಥಾಪನೆ ಮಾಡಿದ ಬಳಿಕ ಪ್ರಧಾನಿ ಮೋದಿ ಅವರು ಈ ರೀತಿ ಹೇಳಿದರು. ಇದೇ ವೇಳೆ ನವೆಂಬರ್ 26ನ್ನು ಸಂವಿಧಾನ ದಿನ ಎಂದು ಆಚರಿಸುವುದಾಗಿ ಘೋಷಿಸಿದ್ದು, ಅಂದು ದೇಶದ ಜನತೆ ಅಂಬೇಡ್ಕರ್ ಕುರಿತಾಗಿ ಹಾಗೂ ಅವರ ಆಲೋಚನೆ, ಕೊಡುಗೆಗಳನ್ನು ಅರಿಯಲು ಸಹಾಯವಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


