ದೇಶ

ಪ್ರತಿ ಚುನಾವಣೆ ಪ್ರತಿಷ್ಠೆಯ ವಿಷಯ: ರಾಜನಾಥ್ ಸಿಂಗ್

ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಉಳಿದಿದ್ದು, ಬಿಜೆಪಿಯ ಹಿರಿಯ ನಾಯಕ...

ಪ್ರತಿ ಚುನಾವಣೆ ಪ್ರತಿಷ್ಠೆಯ ವಿಷಯ: ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
Published On :

ನವದೆಹಲಿ: ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಉಳಿದಿದ್ದು, ಬಿಜೆಪಿಯ ಹಿರಿಯ ನಾಯಕ ಮತ್ತು ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿ ಪ್ರತಿ ಚುನಾವಣೆ ಪ್ರತಿಷ್ಠೆಯ ವಿಷಯವಾಗಿರುತ್ತದೆ ಎಂದು ಹೇಳಿದ್ದಾರೆ.
ಪಕ್ಷಗಳಿಗೆ ಪ್ರತಿ ಚುನಾವಣೆಯೂ ಪ್ರತಿಷ್ಠೆಯ ವಿಷಯವಾಗುತ್ತದೆ.ಒಂದು ವೇಳೆ ಬಿಜೆಪಿ ಬಿಹಾರ ಚುನಾವಣೆಯಲ್ಲಿ ಗೆಲ್ಲದೇ ಇದ್ದರೂ ಬಿಹಾರದ ಅಭಿವೃದ್ಧಿಗೆ ಶ್ರಮಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಎಲ್ಲಾ ರಾಜ್ಯಗಳ ಬೆಳವಣಿಗೆಗೆ ಆದ್ಯತೆ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಬಿಹಾರ ಚುನಾವಣೆಯಲ್ಲಿ ಗೆಲ್ಲದಿದ್ದರೂ ಆ ರಾಜ್ಯಕ್ಕೆ 1.25 ಕೋಟಿ ರೂಪಾಯಿ ನೆರವಿನ ಪ್ಯಾಕೇಜ್ ನೀಡುತ್ತೇವೆ. ನಮ್ಮ ಬದ್ಧತೆಯನ್ನು ನಾವು ಈಡೇರಿಸುತ್ತೇವೆ. ನಾವು ಗೆಲ್ಲಲಿ, ಬಿಡಲಿ ಬಿಹಾರ ಜನತೆಯನ್ನು ಕೈಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಬಿಹಾರಕ್ಕೆ ಬಿಜೆಪಿಯಿಂದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದಿರುವ ಬಗ್ಗೆ ಕೇಳಿದಾಗ, ಪ್ರತಿ ಚುನಾವಣೆಯಲ್ಲಿ ಪ್ರತಿಯೊಂದು ಪಕ್ಷಗಳೂ ತಮ್ಮದೇ ಆದ ತಂತ್ರಗಳನ್ನು ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತವೆ. ಈ ಹಿಂದೆಯೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿಲ್ಲ. ಜನರ ಆದೇಶದ ಮೇರೆಗೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ತೆಗೆದುಕೊಳ್ಳುತ್ತದೆ.ಬಿಹಾರ ವಿಧಾನಸಭಾ ಚುನಾವಣೆ ಬಿಜೆಪಿ ನೇತೃತ್ವದ ಎನ್ ಡಿಎಗೆ ಅತ್ಯಂತ ಪ್ರಮುಖವಾಗಿದ್ದು, ಬಿಜೆಪಿಯ ಎಲ್ಲಾ ಹಿರಿಯ ನಾಯಕರು ಬಿಹಾರ ಜನತೆಯ ಮನವೊಲಿಸುವಲ್ಲಿ ನಿರತರಾಗಿದ್ದರು. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಎನ್ ಡಿಎ ಬಿಹಾರದಲ್ಲಿ ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.

ಅಕ್ಟೋಬರ್ 12, 16, 28, ನವೆಂಬರ್ 1 ಮತ್ತು 5 ರಂದು ಐದು ಹಂತಗಳಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 8ರಂದು ಮತ ಎಣಿಕೆ ನಡೆಯಲಿದೆ. ಪ್ರಸ್ತುತ ಇರುವ ಸರ್ಕಾರದ ಅವಧಿ ನವೆಂಬರ್ 29ರಂದು ಕೊನೆಗೊಳ್ಳಲಿದೆ.ವಿಧಾನಸಭೆ ಚುನಾವಣೆಯಲ್ಲಿ ಗೆದ್ದರೆ ಅದರ ಪ್ರಭಾವ ಬೀರುತ್ತದೆ ಆದರೆ ಅದರ ಪ್ರಮಾಣ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಒಂದು ರಾಜ್ಯದಲ್ಲಿ ಪಕ್ಷ ಗೆದ್ದರೆ ದೇಶಾದ್ಯಂತ ಗೆಲ್ಲುತ್ತದೆ ಎಂಬುದು ಸುಳ್ಳು ಎಂದು ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ವರ್ಷ ಪಶ್ಮಿಮ ಬಂಗಾಳ, ಕೇರಳ, ತಮಿಳು ನಾಡಿನಲ್ಲಿ 2016ರಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ 2017ರಲ್ಲಿ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.