ಆಸೀಂ ಖಾನ್ ಪ್ರಕರಣ: ಆಪ್ ಶಾಸಕರನ್ನು ಭೇಟಿ ಮಾಡಿದ ಕೇಜ್ರಿವಾಲ್
ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಕ್ಷ ತನ್ನ ಪಕ್ಷದಲ್ಲೇ ಭ್ರಷ್ಟಚಾರ ನಡೆಯುತ್ತಿದ್ದರೂ ಸುಮ್ಮನಿದೆ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ನಿನ್ನೆಯಷ್ಟೇ ದಿಟ್ಟ ಉತ್ತರ ನೀಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಕ್ಷ ತನ್ನ ಪಕ್ಷದಲ್ಲೇ ಭ್ರಷ್ಟಚಾರ ನಡೆಯುತ್ತಿದ್ದರೂ ಸುಮ್ಮನಿದೆ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ನಿನ್ನೆಯಷ್ಟೇ ದಿಟ್ಟ ಉತ್ತರ ನೀಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಹಾರ ಮತ್ತು ಸರಬರಾಜು ಸಚಿವ ಆಸೀಂ ಖಾನ್ ಅವರನ್ನು ವಜಾಗೊಳಿಸಿದ್ದರು. ಇದೀಗ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಅವರು ಪಕ್ಷದ ಶಾಸಕರನ್ನು ಭಾನುವಾರ ಭೇಟಿ ಮಾಡಿರುವುದಾಗಿ ತಿಳಿದುಬಂದಿದೆ.
ಇಂದು ಆಮ್ ಆದ್ಮಿ ಪಕ್ಷದ ಶಾಸಕರನ್ನು ಭೇಟಿ ಮಾಡಿರುವ ಅವರು, ಪಕ್ಷದ ಹಿನ್ನೆಲೆ, ಸಿದ್ಧಾಂತ ವಾದ ಭ್ರಷ್ಟಾಚಾರ ವಿರೋಧಿ ಚಳುವಳಿಯನ್ನು ಮರೆಯದಂತೆ ಹೇಳಿದ್ದು, ಘಟನೆ ಮರುಕಳಿಸದಂತೆ ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.
ವಕ್ಷದ ಶಾಸಕರನ್ನು ಭೇಟಿ ಮಾಡಿರುವ ಕುರಿತಂತೆ ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಕೇಜ್ರಿವಾಲ್ ಅವರು, ಪಕ್ಷ ರಾಜಕೀಯ ರಂಗಕ್ಕೆ ಇಳಿಯಲು ಪ್ರಮುಖ ಕಾರಣವನ್ನು ಮನದಟ್ಟು ಮಾಡಿಕೊಳ್ಳುವಂತೆ ಶಾಸಕರಿಗೆ ಹೇಳಿದ್ದು, ಆಸೀಂ ಖಾನ್ ಪ್ರಕರಣ ಮರುಕಳಿಸದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಆಸೀಂ ಖಾನ್ ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ದಿಲೀಪ್ ಪಾಂಡೆ ಅವರು, ಬಡತನ ಹಾಗೂ ಅವಮಾನವನ್ನು ಬೇಕಿದ್ದರೆ ನಾವು ಸಹಿಸಿಕೊಳ್ಳುತ್ತೇವೆ. ಆದರೆ, ಭ್ರಷ್ಟಚಾರವನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


