ಬಿಹಾರ ವಿಧಾನಸಭಾ ಚುನಾವಣೆ: ಶೇ.57ರಷ್ಟು ದಾಖಲೆ ಮತದಾನ
ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಶಾಂತಿಯುತವಾಗಿ ನಡೆದಿದ್ದು, ಶೇ.57ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ ಎಂದು...

Published On :
ಪಾಟ್ನ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಶಾಂತಿಯುತವಾಗಿ ನಡೆದಿದ್ದು, ಶೇ.57ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಬಿಹಾರದ 10 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ 49 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಇದುವರೆಗೆ ಯಾವುದೇ ಬಗೆಯ ಅಹಿತಕರ ಘಟನೆಗಳು ವರದಿಯಾಗಿಲ್ಲ.
ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಮುಕ್ತಾಯದ ವೇಳೆಗೆ ಗರಿಷ್ಠ ಶೇ.57 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಬಿಹಾರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಮತದಾರರ ಸಂಖ್ಯೆ 1,35,72,339 ಇದ್ದು, ಅದರಲ್ಲಿ 72,37,253 ಪುರುಷರಿದ್ದರೆ, ಮಹಿಳೆಯರ ಸಂಖ್ಯೆ 63,17,602 ಉಳಿದಂತೆ ತೃತೀಯ ಲಿಂಗಿಗಳ ಸಂಖ್ಯೆ 405 ಇದೆ. ಈ ಮತದಾರರು ಮೊದನೇ ಸುತ್ತಿನ ಮತದಾನದಲ್ಲಿ ಮತಚಲಾಯಿಸುತ್ತಿದ್ದು, ಚುನಾವಣಾ ಕಣದಲ್ಲಿರುವ ಒಟ್ಟು 583 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧಾರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


