ಬಿಹಾರ ಸೋಲಿನ ನಂತರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ?: ಲಾಲು
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)ದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್...

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)ದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, ಬಿಹಾರ ಸೋಲಿನ ನಂತರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ? ಎಂದು ಸೋಮವಾರ ಪ್ರಶ್ನಿಸಿದ್ದಾರೆ.
'ಬಿಜೆಪಿ ಮೋದಿ ನೇತೃತ್ವದಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರ ನಡೆಸುತ್ತಿದೆ. ಕಳೆದ ಮೂರು ತಿಂಗಳಿಂದ ಇಡೀ ಅವರ ಸಚಿವ ಸಂಪುಟವೇ ಪ್ರಚಾರದಲ್ಲಿ ಭಾಗಿಯಾಗಿದೆ. ಚುನಾವಣೆಯಲ್ಲಿ ಸೋತರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೆಯೇ?' ಎಂದು ಲಾಲು ಟ್ವೀಟ್ ಮಾಡಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಮೋದಿ ಲಾಲು ಪ್ರಸಾದ್ ಯಾದವ್ ಹಾಗೂ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರೇ ನೇರ ಎದುರಾಳಿಗಳು. ಚುನಾವಣಾ ರ್ಯಾಲಿಯಲ್ಲಿ ಈ ಇಬ್ಬರ ವಿರುದ್ಧ ಮೋದಿ ವಾಗ್ದಾಳಿ ನಡೆಸುತ್ತಿದ್ದಾರೆ.
'ಕಳೆದ 25 ವರ್ಷಗಳಿಂದ ಬಡಾ ಭಾಯಿ(ಲಾಲು) ಮತ್ತು ಛೋಟಾ ಭಾಯಿ(ನಿತಿಶ್) ಬಿಹಾರದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಆದರೆ ಅವರು ಯಾವತ್ತೂ ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಿಲ್ಲ' ಎಂದು ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ವಾಗ್ದಾಳಿ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


