ದೇಶ

ಕುಲಕರ್ಣಿ ಮುಖಕ್ಕೆ ಮಸಿ: ಕಾಂಗ್ರೆಸ್ ಖಂಡನೆ

ಬಿಜೆಪಿ ಹಿರಿಯ ಮುಖಂಡ ಎಲ್.ಕೆ ಅಡ್ವಾಣಿ ಅವರ ಆಪ್ತ ಮತ್ತು ಮಾಧ್ಯಮ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ...

ಕುಲಕರ್ಣಿ ಮುಖಕ್ಕೆ ಮಸಿ: ಕಾಂಗ್ರೆಸ್ ಖಂಡನೆ
ದಿಗ್ವಿಜಯ್ ಸಿಂಗ್
Published On :
ಮುಂಬೈ: ಬಿಜೆಪಿ ಹಿರಿಯ ಮುಖಂಡ ಎಲ್.ಕೆ ಅಡ್ವಾಣಿ ಅವರ ಆಪ್ತ ಮತ್ತು ಮಾಧ್ಯಮ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ಸುಧೀಂದ್ರ ಕುಲಕರ್ಣಿ ಅವರಿಗೆ ಮಸಿ ಬಳಿಯುವಂತ ಹೇಯ ಕೃತ್ಯಗಳನ್ನು ಎಸಗುವ ಮೂಲಕ ಶಿವಸೇನೆ ದೇಸಿ ತಾಲಿಬಾನ್ ಆಗಿ ಪರಿಣಮಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಮೊದಲಿಗೆ ಪಾಕಿಸ್ತಾನ ಗಾಯಕ ಗುಲಾಂ ಅಲಿ ಅವರ ಸಂಗೀತ ಕಾರ್ಯಕ್ರಮಕ್ಕೆ ವಿರೋಧ ನಂತರ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಕಸೂರಿ ಅವರ ಪುಸ್ತಕ ಬಿಡುಗಡೆ ಸಮಾರಂಭದ ಆಯೋಜನೆ ಕುಲಕರ್ಣಿ ಅವರ ಸಂಸ್ಥೆ ಮಾಡಿದೆ ಎಂಬ ಕಾರಣಕ್ಕೆ ಶಿವಸೇನೆ ಈ ರೀತಿ ವರ್ತಿಸುವುದು ಸರಿಯಲ್ಲ. ಈ ದೇಶ ಅಸಹಿಷ್ಣುತೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. 
ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಕಸೂರಿ ಅವರ "ನೈದರ್ ಎ ಹಾಕ್, ನಾರ್ ಎ ಡವ್, ಆ್ಯನ್ ಇನ್ ಸೈಡರ್ ಅಕೌಂಟ್ ಆಫ್ ಪಾಕಿಸ್ತಾನ್ಸ್ ಫಾರಿನ್ ಪಾಲಿಸಿ" ಪುಸ್ತಕ ಬಿಡುಗಡೆ ಸಮಾರಂಭವನ್ನು ಕುಲಕರ್ಣಿ ಅವರ ಸಂಸ್ಥೆ ಆಯೋಜನೆ ಮಾಡಿತ್ತು. ಅದನ್ನು ವಿರೋಧಿಸಿ ಶಿವನಸೇನಾ ಕಾರ್ಯಕರ್ತರು ಇಂದು ಬೆಳಗ್ಗೆ ಮುಂಬೈನ ಅವರ ಮನೆಗೇ ನುಗ್ಗಿ ಅವರ ಮುಖಕ್ಕೆ ಮಸಿ ಬಳಿದಿದ್ದರು. ಅವರ ಮನೆಯ ಮುಂಬಾಗಿಲಿಗೆ ಬಂದಂತಹ ಶಿವಸೇನೆ ಕಾರ್ಯಕರ್ತರ ತಂಡ ಅವರ ಮುಖಕ್ಕೆ ಮಸಿಯನ್ನು ಸುರಿದು ಅಲ್ಲಿಂದ ಪರಾರಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.