ವಾಯುದಾಳಿಯಲ್ಲಿ ಐಸಿಸ್ ಮುಖ್ಯಸ್ಥ ಅಬೂಬಕರ್ ಸತ್ತಿಲ್ಲ
ಇರಾಕ್ ಅನ್ನು ಪೀಡಿಸುತ್ತಿರುವ ಇಸಿಸ್ ಎಂಬ ಪೈಶಾಚಿಕ ಉಗ್ರ ಸಂಘಟನೆಯನ್ನು ತೊಡೆದು ಹಾಕಲು ಅಮೆರಿಕ ನೇತೃತ್ವದ ಸೇನಾಪಡೆಗಳು ಭಾನುವಾರ...

Published On :
ಬಾಗ್ದಾದ್: ಇರಾಕ್ ಅನ್ನು ಪೀಡಿಸುತ್ತಿರುವ ಇಸಿಸ್ ಎಂಬ ಪೈಶಾಚಿಕ ಉಗ್ರ ಸಂಘಟನೆಯನ್ನು ತೊಡೆದು ಹಾಕಲು ಅಮೆರಿಕ ನೇತೃತ್ವದ ಸೇನಾಪಡೆಗಳು ಭಾನುವಾರ ನಡೆಸಿದ ವಾಯುದಾಳಿಯಲ್ಲಿ ಇಸ್ಲಾಮಿಕ್ ಸಂಘಟನೆಯ ಮುಖ್ಯಸ್ಥ ಅಬೂಬಕರ್ ಅಲ್ ಬಾಗ್ದಾದಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾನೆ.
ನಿನ್ನೆ ನಡೆದ ವಾಯುದಾಳಿಯಲ್ಲಿ ಇಸಿನ ವಿವಿಧ ಕ್ಯಾಂಪ್ ಗಳಲ್ಲಿದ್ದ ಒಟ್ಟು ಎಂಟು ಮಂದಿ ಮುಖ್ಯಸ್ಥರು ಸಾವನ್ನಪ್ಪಿದ್ದರು. ಇದರಲ್ಲಿ ಐಸಿಸ್ ಮುಖ್ಯಸ್ಥ ಅಬೂಬಕರ್ ಅಲ್ ಬಾಗ್ದಾದಿ ಕೂಡ ಸೇರಿದ್ದಾನೆ ಎಂದು ಹೇಳಲಾಗುತ್ತಿತ್ತು. ಆದರೆ ಬಳಿಕ ಬಂದ ವರ್ತಮಾನಗಳ ಪ್ರಕಾರ ಅಬೂಬಕರ್ ಅಲ್ ಬಾಗ್ದಾದಿ ವಾಯುದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಇರಾಕ್ ಸೇನೆ ಇಂದು ಹೇಳಿಕೆ ಬಿಡುಗಡೆ ಮಾಡಿದ್ದು, ಭಾನುವಾರ ಅಮೆರಿಕ ಸೇನಾ ಪಡೆಯು ಐಸಿಸ್ ಮುಖ್ಯಸ್ಥ ಬಾಗ್ದಾದಿಯನ್ನು ಗುರಿಯಾಗಿಸಿ ದಾಳಿ ನಡೆಸಿತ್ತು. ಪಶ್ಚಿಮ ಇರಾಕ್‌ನಲ್ಲಿ ಇಸಿಸ್ ಮುಖ್ಯಸ್ಥ ಅಬೂಬಕರ್ ಅಲ್ ಬಾಗ್ದಾದಿ ನಡೆಸುತ್ತಿದ್ದ ಎಂದು ಹೇಳಲಾಗಿದ್ದ ಇಸಿಸ್ ಸಭೆ ಮೇಲೆ ಸೇನಾಪಡೆ ದಾಳಿ ನಡೆಸಿತ್ತು. ಆದರೆ ಈ ದಾಳಿಯಲ್ಲಿ ಬಾಗ್ದಾದಿ ಬೆಂಗಾವಲು ಪಡೆಯವರೂ ಸೇರಿದಂತೆ, ಐಸಿಸ್‌ನ ಅನೇಕ ಪ್ರಮುಖ ಉಗ್ರರು ಹತರಾಗಿದ್ದಾರೆ. ದಾಳಿ ನಂತರ ಕಾರ್ಯಾಚರಣೆ ಮುಂದುವರೆಸಲಾಗಿದೆ. ಆದರೆ ಸ್ಥಳೀಯ ಆಸ್ಪತ್ರೆಗಳ ಮೂಲಗಳ ಪ್ರಕಾರ ಬಾಗ್ದಾದಿಯ ಬಗ್ಗೆ ಯಾವ ಸುಳಿವೂ ಸಿಕ್ಕಿಲ್ಲ ಎಂದು ಇರಾಕ್ ಸೇನೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Abu Bakr al-BaghdadiBaghdadಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆIslamic State terror groupಬಾಗ್ದಾದ್Air strikeವಾಯುದಾಳಿಅಬೂಬಕರ್ ಅಲ್ ಬಾಗ್ದಾದಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


