ದೇಶ

ಬಿಹಾರ ಸಮರ ಆರಂಭ: ಮತದಾನದಲ್ಲಿ ಪಾಲ್ಗೊಳ್ಳುವಂತೆ ಮೋದಿ ಕರೆ

ಬಹು ಚರ್ಚಿತ ಬಿಹಾರ ವಿಧಾನಸಭಾ ಚುನಾವಣಾ ಸಮರ ಸೋಮವಾರ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಬಿಹಾರ ಜನತೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ಮೋದಿಯವರು ಸೋಮವಾರ ಕರೆ ನೀಡಿದ್ದಾರೆ...

ಬಿಹಾರ ಸಮರ ಆರಂಭ: ಮತದಾನದಲ್ಲಿ ಪಾಲ್ಗೊಳ್ಳುವಂತೆ ಮೋದಿ ಕರೆ
ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Published On :

ಪಾಟ್ನ: ಬಹು ಚರ್ಚಿತ ಬಿಹಾರ ವಿಧಾನಸಭಾ ಚುನಾವಣಾ ಸಮರ ಸೋಮವಾರ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಬಿಹಾರ ಜನತೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ಮೋದಿಯವರು ಸೋಮವಾರ ಕರೆ ನೀಡಿದ್ದಾರೆ.

ಬಿಹಾರ ಚುನಾವಣೆ ಕುರಿತಂತೆ ಇಂದು ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಆರಂಭಗೊಳ್ಳುತ್ತಿದ್ದು, ಜನತೆಯೆಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ. ಈ ಬಾರಿಯ ಚುನಾವಣೆಯಲ್ಲಿ ಬಹು ಜನರು ಭಾಗವಹಿಸಬೇಕು. ಪ್ರಮುಖವಾಗಿ ನನ್ನ ಯುವ ಸ್ನೇಹಿತರು ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಇಂದು ಬೆಳಿಗ್ಗೆಯಿಂದಲೇ ಮೊದಲ ಹಂತದ ಮತದಾನ ಆರಂಭಗೊಂಡಿದ್ದು, ಒಟ್ಟು  49 ಕ್ಷೇತ್ರಗಳ ಸ್ಪರ್ಧಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.