ದೇಶ

ಭಾರತ ವಿರೋಧಿ ಧೋರಣೆ ಸಹಿಸಲಸಾಧ್ಯ: ಫಡ್ನವಿಸ್

ಎಲ್ ಕೆ ಅಡ್ವಾಣಿ ಅವರ ಆಪ್ತ ಮತ್ತು ಅವರ ಮಾಧ್ಯಮ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿಕ ಘಟನೆಗೆ...

ಭಾರತ ವಿರೋಧಿ ಧೋರಣೆ ಸಹಿಸಲಸಾಧ್ಯ: ಫಡ್ನವಿಸ್
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ (ಸಂಗ್ರಹ ಚಿತ್ರ)
Published On :
ಮುಂಬೈ: ಎಲ್ ಕೆ ಅಡ್ವಾಣಿ ಅವರ ಆಪ್ತ ಮತ್ತು ಅವರ ಮಾಧ್ಯಮ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿಕ ಘಟನೆಗೆ 
ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಭಾರತ ವಿರೋಧಿ ಪ್ರಚಾರವನ್ನು ಸಹಿಸಲಸಾಧ್ಯ ಎಂದು ಹೇಳಿದ್ದಾರೆ.
ಮುಂಬೈನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ದೇಶ ವಿರೋಧಿ ಕಾರ್ಯಕ್ರಮಗಳ ಪ್ರಚಾರಕ್ಕೆ ರಾಜ್ಯದಲ್ಲಿ ಅವಕಾಶವಿಲ್ಲ. ಒಂದು ಅಂತಹ ಕಾರ್ಯಕ್ರಮಗಳ ಆಯೋಜನೆಯಾಗಿದ್ದೇ ಆದರೆ ಆಯೋಜಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಫಡ್ನವಿಸ್ ಎಚ್ಚರಿಕೆ ನೀಡಿದ್ದಾರೆ. ಆ ಮೂಲಕ ಸುದೀಂಧ್ರ ಕುಲಕರ್ಣಿ ಮುಖಕ್ಕೆ ಮಸಿ ಬಳಿದ ಶಿವಸೇನೆ ಕಾರ್ಯಕರ್ತರ ಕೃತ್ಯವನ್ನು ಪರೋಕ್ಷವಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಮರ್ಥಿಸಿಕೊಂಡಿದ್ದಾರೆ.
ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಕಸೂರಿ ಅವರ "ನೈದರ್ ಎ ಹಾಕ್, ನಾರ್ ಎ ಡವ್, ಆ್ಯನ್ ಇನ್ ಸೈಡರ್ ಅಕೌಂಟ್ ಆಫ್ ಪಾಕಿಸ್ತಾನ್ಸ್ ಫಾರಿನ್ ಪಾಲಿಸಿ" ಪುಸ್ತಕ ಬಿಡುಗಡೆ ಸಮಾರಂಭವನ್ನು ಕುಲಕರ್ಣಿ ಅವರ ಸಂಸ್ಥೆ ಆಯೋಜನೆ ಮಾಡಿತ್ತು. ಅದನ್ನು ವಿರೋಧಿಸಿ ಶಿವನಸೇನಾ ಕಾರ್ಯಕರ್ತರು ಇಂದು ಬೆಳಗ್ಗೆ ಮುಂಬೈನ ಅವರ ಮನೆಗೇ ನುಗ್ಗಿ ಅವರ ಮುಖಕ್ಕೆ ಮಸಿ ಬಳಿದಿದ್ದರು. ಅವರ ಮನೆಯ ಮುಂಬಾಗಿಲಿಗೆ ಬಂದಂತಹ ಶಿವಸೇನೆ ಕಾರ್ಯಕರ್ತರ ತಂಡ ಅವರ ಮುಖಕ್ಕೆ ಮಸಿಯನ್ನು ಸುರಿದು ಅಲ್ಲಿಂದ ಪರಾರಿಯಾಗಿದ್ದಾರೆ. 
ಪ್ರಕರಣದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧೀಂದ್ರ ಕುಲಕರ್ಣಿ, ತಾವು ಯಾವುದೇ ಕಾರಣಕ್ಕೂ ಕಸೂರಿ ಅವರ ಪುಸ್ತಕ ಬಿಡುಗಡೆ ಸಮಾರಂಭ ರದ್ದು ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.