ಸುಧೀಂದ್ರ ಕುಲಕರ್ಣಿಯನ್ನು ಕಸಬ್‌ಗೆ ಹೋಲಿಸಿದ ಶಿವಸೇನೆ
ಪಾಕಿಸ್ತಾನ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹಮ್ಮದ್ ಕಸೂರಿ ಪುಸ್ತಕ ಬಿಡುಗಡೆ ವಿರೋಧಿಸಿ ಕಾರ್ಯಕ್ರಮ ಆಯೋಜಕ, ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ...

ಮುಂಬೈ: ಪಾಕಿಸ್ತಾನ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹಮ್ಮದ್ ಕಸೂರಿ ಪುಸ್ತಕ ಬಿಡುಗಡೆ ವಿರೋಧಿಸಿ ಕಾರ್ಯಕ್ರಮ ಆಯೋಜಕ, ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ ಅವರ ಆಪ್ತ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಸೋಮವಾರ ಮಸಿ ಬಳೆದಿದ್ದ ಶಿವಸೇನೆ, ಇದೀಗ ಅವರನ್ನು ಅಜ್ಮಲ್ ಕಸಬ್ ಹೋಲಿಸಿದೆ.
ಶಿವಸೇನೆ ಮುಖವಾಣಿ ಸಾಮ್ನಾನದಲ್ಲಿ ಕುಲಕರ್ಣಿಯನ್ನು ತೀವ್ರವಾಗಿ ಖಂಡಿಸಿಲಾಗಿದೆ. ಸುಧೀಂದ್ರ ಕುಲಕರ್ಣಿ ಪಾಕಿಸ್ತಾನಿ ಏಜೆಂಟ್ ಎಂದಿರುವ ಸೇನೆ, ಕುಲಕರ್ಣಿಯಂತಹ ಜನ ಭಾರತದಲ್ಲೇ ಇರಬೇಕಾದರೆ, ಪಾಕಿಸ್ತಾನ ಅಜ್ಮಲ್ ಕಸಬ್‌ನಂತವರನ್ನು ಭಾರತಕ್ಕೆ ಕಳುಹಿಸುವ ಅಗತ್ಯ ಇಲ್ಲ ಎಂದಿದೆ.
ಇದೇ ವೇಳೆ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿರುವ ಶಿವಸೇನೆ, ಮತಕ್ಕಾಗಿ ಲಂಚ ಹಗರಣದಲ್ಲಿ ಸುಧೀಂದ್ರ ಕುಲಕರ್ಣಿಯವರ ಕೈವಾಡ ಇತ್ತು ಎಂದು ಹೇಳಿದೆ.
ಕಸೂರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡಿದ ಸುಧೀಂದ್ರ ಕುಲಕರ್ಣಿ ಇದೊಂದು ಉತ್ತಮ ಪಾಠ ಮತ್ತು ಪಾಕಿಸ್ತಾನಿ ಕಲಾವಿದರು ಹಾಗೂ ಗಣ್ಯರ ವಿರುದ್ಧದ ಬಹಿಷ್ಕಾರ ಮುಂದುವರೆಯಲಿದೆ ಎಂದು ಸೇನೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


