ಕೆಡಿಎಂಸಿ ಚುನಾವಣೆ: ಬಿಜೆಪಿ ಮೈತ್ರಿ ತೊರೆದ ಶಿವಸೇನೆ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರ ಹಂಚಿಕೊಂಡಿರುವ ಶಿವಸೇನೆ ಈಗ ಮುಂಬರುವ ಕಲ್ಯಾಣ್-ದೊಂಬಿವಿಲಿ ಮಹಾನಗರ ಪಾಲಿಕೆ(ಕೆಡಿಎಂಸಿ) ಚುನಾವಣೆಯಲ್ಲಿ...

ಮುಂಬೈ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರ ಹಂಚಿಕೊಂಡಿರುವ ಶಿವಸೇನೆ ಈಗ ಮುಂಬರುವ ಕಲ್ಯಾಣ್-ದೊಂಬಿವಿಲಿ ಮಹಾನಗರ ಪಾಲಿಕೆ(ಕೆಡಿಎಂಸಿ) ಚುನಾವಣೆಯಲ್ಲಿ ಏಕಾಂಗಿ ಹೋರಾಟ ನಡೆಸಲು ನಿರ್ಧರಿಸಿದೆ.
ಪಕ್ಷದ ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿ ನಡೆದ ಸಭೆಯಲ್ಲಿ ಬಿಜೆಪಿ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ತೊರೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪಾಕಿಸ್ತಾನ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹಮ್ಮದ್ ಕಸೂರಿ ಪುಸ್ತಕ ಬಿಡುಗಡೆ ವಿರೋಧಿಸಿ ಪ್ರತಿಭಟನೆ ನಡೆಸಿದ ಶಿವಸೇನೆಯನ್ನು ತರಾಟೆಗೆ ತೆಗೆದುಕೊಂಡ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸೇನಾ ನಾಯಕರೊಬ್ಬರು ಹೇಳಿದ್ದಾರೆ.
ಕಲ್ಯಾಣ್ ಮತ್ತು ದೊಂಬಿವಲಿ ಸೆಟ್‌ಲೈಟ್ ನಗರಗಳಾಗಿದ್ದು, ಮುಂಬೈಗೆ ಹೊಂದಿಕೊಂಡಿದೆ. ಸದ್ಯ ಈ ನಗರ ಪಾಲಿಕೆಯಲ್ಲಿ ಸೇನಾ-ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದೆ. ಈಗ ಮೈತ್ರಿಯಿಂದ ಹೊರ ಬಂದಿರುವ ಶಿವಸೇನಾ ಎಲ್ಲಾ 122 ಸ್ಥಾನಗಳಲ್ಲೂ ಸ್ಪರ್ಧಿಸಲು ಸಿದ್ಧತೆ ನಡೆಸಿದೆ. ನವೆಂಬರ್ 1ರಂದು ಕೆಡಿಎಂಸಿ ಚುನಾವಣೆ ನಡೆಯಲಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ರಾವ್ ಸಾಹೇಬ್ ದನ್ವೆ ಅವರು, ಮೈತ್ರಿಗೆ ಸಂಬಂಧಿಸಿದಂತೆ ಕಲ್ಯಾಣ್‌ದ ಸ್ಥಳೀಯ ಬಿಜೆಪಿ ಘಟಕ ನಿರ್ಧಾರ ತೆಗೆದುಕೊಳ್ಳಲಿದೆ. ಅವರ ಮೇಲೆ ನಾವು ಯಾವುದೇ ಒತ್ತಡ ಹೇರುವುದಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


