ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ದಕ್ಷಿಣ ಆಫ್ರಿಕಾ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತೀಯ ರಾಜಕಾರಣಿ ಪ್ರಕಾಶ್ ಸಿಂಗ್ ಬಾದಲ್ ರನ್ನು ದಕ್ಷಿಣ ಅಫ್ರಿಕಾದ ರಾಷ್ಟ್ರಪಿತ ನೆಲ್ಸನ್ ಮಂಡೇಲಾ ಅವರಿಗೆ ಹೋಲಿಕೆ ಮಾಡಿರುವುದರ ವಿರುದ್ಧ ಕೆಂಡಾಮಂಡಲವಾಗಿರುವ ದಕ್ಷಿಣ ಆಫ್ರಿಕಾ...

ಕೇಪ್ ಟೌನ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತೀಯ ರಾಜಕಾರಣಿ ಪ್ರಕಾಶ್ ಸಿಂಗ್ ಬಾದಲ್ ರನ್ನು ದಕ್ಷಿಣ ಅಫ್ರಿಕಾದ ರಾಷ್ಟ್ರಪಿತ ನೆಲ್ಸನ್ ಮಂಡೇಲಾ ಅವರಿಗೆ ಹೋಲಿಕೆ ಮಾಡಿರುವುದರ ವಿರುದ್ಧ ಕೆಂಡಾಮಂಡಲವಾಗಿರುವ ದಕ್ಷಿಣ ಆಫ್ರಿಕಾ ಸರ್ಕಾರವು ಮೋದಿ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮಂಗಳವಾರ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ವರದಿಗಳು ತಿಳಿಸಿವೆ.
ಪ್ರಕಾಶ್ ಸಿಂಗ್ ಬಾದಲ್ ಕುರಿತಂತೆ ಅ.11ರಂದು ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಸಂದೇಶ ರವಾನಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಬಾದಲ್ ಅವರು ಇಲ್ಲಿ ಕುಳಿತಿದ್ದಾರೆ. ಬಾದಲ್ ಅವರು ಭಾರತದ ನೆಲ್ಸನ್ ಮಂಡೇಲ ಎಂಬುದಷ್ಟೇ ಎಲ್ಲರಿಗೂ ತಿಳಿದಿದೆ. ಆದರೆ, ಅವರು ರಾಜಕೀಯದ ಕೆಲವು ಕಾರಣಗಳಿಂದ ಅವರ ಜೀವನದ ಸಾಕಷ್ಟು ಸಮಯವನ್ನು ಜೈಲಿನಲ್ಲೇ ಕಳೆದಿದ್ದರು ಎಂಬುದು ಯಾರಿಗೂ ತಿಳಿದಿಲ್ಲ ಎಂದು ಹೇಳಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


