ದೇಶ

ಜಯಾ ಅಕ್ರಮ ಆಸ್ತಿ ಪ್ರಕರಣ ವಿಚಾರಣೆ ನ.23ಕ್ಕೆ ಮುಂದೂಡಿಕೆ

ತಮಿಳುನಾಡು ಸಿಎಂ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ. 23ಕ್ಕೆ ಮುಂದೂಡಿದೆ...

ಜಯಾ ಅಕ್ರಮ ಆಸ್ತಿ ಪ್ರಕರಣ ವಿಚಾರಣೆ ನ.23ಕ್ಕೆ ಮುಂದೂಡಿಕೆ
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ (ಸಂಗ್ರಹ ಚಿತ್ರ)
Published On :

ನವದೆಹಲಿ: ತಮಿಳುನಾಡು ಸಿಎಂ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ. 23ಕ್ಕೆ ಮುಂದೂಡಿದೆ.

ಸೋಮವಾರ ವಿಚಾರಣೆ ವೇಳೆ ಜಯಲಲಿತಾ ಅವರಿಗೆ ಹಣ ನೀಡಿದ ಆರೋಪ ಹೊತ್ತ ಕಂಪನಿಗಳ ಪರವಕೀಲರು ತ್ವರಿತ ವಿಚಾರಣೆಗೆ ಮನವಿ ಮಾಡಿದರು. ಆದರೆ, ಕರ್ನಾಟಕ ಸರ್ಕಾರದ ಪರ ವಕೀಲರು ಜನವರಿ ಅಥವಾ ಫೆಬ್ರವರಿಯಲ್ಲಿ ವಿಚಾರಣೆ ನಡೆಸಬೇಕು ಎಂದು ನ್ಯಾ.ಪಿನಾಕಿ ಚಂದ್ರ ಘೋಷ್ ನೇತೃತ್ವ ನ್ಯಾಪೀಠದ ಮುಂದೆ ಕೋರಿದರು. ವಾದಿ, ಪ್ರತಿವಾದಿಗಳು ಅಗತ್ಯ ದಾಖಲೆ ಸಲ್ಲಿಸಿ, ಅದಕ್ಕೆ ಪ್ರತಿ ದಾಖಲೆ ಒದಗಿಸುವ ಪ್ರಕ್ರಿಯೆಯನ್ನು ನ.23 ರೊಳಗೆ ಪೂರ್ಣಗೊಳಿಸಿ. ನ.23 ರಂದು ವಿಚಾರಣೆ ಯಾವಾಗ ಆರಂಭವಾಗಬೇಕು ಎಂಬುದನ್ನು ನಿರ್ಧರಿಸೋಣ.

ನಂತರ ವಾರಕ್ಕೆ 3 ದಿನ ವಿಚಾರಣೆ ನಡೆಸಬಹುದು ಎಂದು ಹೇಳಿದ ನ್ಯಾಯಮೂರ್ತಿಗಳು ವಿಚಾರಣೆ ಮುಂದೂಡಿದರು. ಈಗ ಕರ್ನಾಟಕ ಸರ್ಕಾರದ ಪರ ವಕೀಲ ಬಿ.ವಿ. ಆಚಾರ್ಯ ಅವರಿಗೆ ದುಶ್ಯಂತ ದವೆ ಅವರು ನೆರವಾಗಲಿದ್ದಾರೆ. ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣ ದಲ್ಲಿ ಕೆಳ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ರದ್ದು ಪಡಿಸಿತ್ತು. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.