ಬಿಹಾರ ಚುನಾವಣೆ: ಶೇ. 36.27% ರಷ್ಟು ಮತದಾನ
ಬಿಹಾರ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಈ ವರೆಗೂ ಶೇಕಡ 36.27% ರಷ್ಟು ಮತದಾರರು ತಮ್ಮ ಹಕ್ಕು ಚುಲಾಯಿಸಿದ್ದಾರೆ...

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಈ ವರೆಗೂ ಶೇಕಡ 36.27 ರಷ್ಟು ಮತದಾರರು ತಮ್ಮ ಹಕ್ಕು ಚುಲಾಯಿಸಿದ್ದಾರೆ.
ಐದು ಹಂತಗಳ ಪೈಕಿ ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿರುವ ಎಲ್ಲಾ 32 ಕ್ಷೇತ್ರಗಳಲ್ಲಿ ಶಾಂತಿಯುತ ವಾತಾವರಣ ವರದಿಯಾಗಿದೆ.
12 ಗಂಟೆಯ ವರೆಗೆ ಶೇ36.27 ರಷ್ಟು ಮತದಾನವಾಗಿದೆ. ಶಾಂತ ವಾತಾವರಣವಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ’ ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಆರ್.ಲಕ್ಷ್ಮಣನ್ ಅವರು ತಿಳಿಸಿದ್ದಾರೆ.
86,13,870 ಮತದಾರರು ಚುನಾವಣೆಯಲ್ಲಿ ಮತದಾನ ಮಾಡಲಿದ್ದು, 32 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 456 ಅಭ್ಯರ್ಥಿಗಳಲ್ಲಿ ಯಾರು ಜಯಭೇರಿ ಸಾಧಿಸುತ್ತಾರೆ ಎಂಬುದು ನಿರ್ಧಾರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


