ದೇಶ

ಮನೋಹರ್ ಲಾಲ್ ಕಟ್ಟಾರ ಅವರ ಹೇಳಿಕೆ ವೈಯಕ್ತಿಕ, ಪಕ್ಷದ್ದಲ್ಲ: ಬಿಜೆಪಿ

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟಾರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಇದು ಪಕ್ಷದ ನಿಲುವು...

ಮನೋಹರ್ ಲಾಲ್ ಕಟ್ಟಾರ ಅವರ ಹೇಳಿಕೆ ವೈಯಕ್ತಿಕ, ಪಕ್ಷದ್ದಲ್ಲ: ಬಿಜೆಪಿ
ಕೇಂದ್ರ ಸಚಿವ ವೆಂಕಯ್ಯ ನಾಯ್ಡು
Published On :

ನವದೆಹಲಿ: ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟಾರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಇದು ಪಕ್ಷದ ನಿಲುವು ಅಲ್ಲ ಎಂದು ಸ್ಪಷ್ಟಪಡಿಸಿದೆ.ಕಟ್ಟಾರ ಅವರು ತಿಳಿಸಿರುವ ಅಭಿಪ್ರಾಯ ಬಿಜೆಪಿ ಪಕ್ಷದ್ದಲ್ಲ. ನಾನು ಅವರೊಂದಿಗೆ ಮಾತನಾಡಿ ಸಲಹೆ ನೀಡುವೆ. ಮುಸಲ್ಮಾನರ ಬಗ್ಗೆ ಹಾಗೆ ಹೇಳುವುದು ತಪ್ಪಾಗುತ್ತದೆ. ಯಾರೊಬ್ಬರ ಆಹಾರ ಪದ್ಧತಿಯನ್ನು ಧರ್ಮಕ್ಕೆ ಹೋಲಿಸುವುದು ತಪ್ಪಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

ಜನರು ಬೇರೆಯವರ ಭಾವನೆಗಳಿಗೆ ಬೆಲೆ ಕೊಡಬೇಕು.ತಿನ್ನುವ ಆಹಾರ ವ್ಯಕ್ತಿಯ ಆಯ್ಕೆಯೇ ಹೊರತು ಯಾರೊಬ್ಬರೂ ಹೇರಲು ಸಾಧ್ಯವಿಲ್ಲ ಎಂದು ಹೇಳಿದರು.

ವ್ಯಕ್ತಿಯೊಬ್ಬನ ಆಹಾರ ಪದ್ಧತಿಯನ್ನು ವಿರೋಧಿಸಿ ಅವನನ್ನು ಕೊಲ್ಲಲು ಸಾಧ್ಯವಿಲ್ಲ. ದಾದ್ರಿಯಲ್ಲಿ ನಡೆದಿರುವ ಘಟನೆ ಖಂಡನೀಯ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸಹ ಘಟನೆಯನ್ನು ಖಂಡಿಸಿದ್ದಾರೆ ಎಂದರು.

ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದ ಘಟನೆಗೆ ಅಲ್ಲಿನ ಸರ್ಕಾರವೇ ಹೊಣೆ. ಅದು ಬಿಟ್ಟು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಅಪವಾದ ಹೊರಿಸುವುದು ಸರಿಯಲ್ಲ ಎಂದು ವೆಂಕಯ್ಯ ನಾಯ್ಡು ಹೇಳಿದರು.

ದೇಶದಲ್ಲಿ ಅಸ್ಥಿರತೆ ಹೆಚ್ಚಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ಇಂತಹ ಘಟನೆಗಳು ದೇಶದ ಅಲ್ಲಲ್ಲಿ ಈ ಹಿಂದೆಯೂ ನಡೆಯುತ್ತಿದ್ದವು. ಕೇಂದ್ರ ಸರ್ಕಾರವನ್ನು ಮತ್ತು ಪ್ರಧಾನಮಂತ್ರಿಯವರ ಅಭಿವೃದ್ಧಿ ಕೆಲಸವನ್ನು ಹಾಳುಮಾಡಲು ವ್ಯವಸ್ಥಿತ ಮತ್ತು ದುರುದ್ದೇಶಪೂರಿತ ಪ್ರಚಾರ ನಡೆಯುತ್ತಿದೆ ಎಂದು ನಾಯ್ಡು ಆರೋಪಿಸಿದರು.

ಅನೇಕ ಸಾಹಿತಿಗಳು ಪ್ರಶಸ್ತಿಗಳನ್ನು ಹಿಂತಿರುಗಿಸಿದ ಕ್ರಮ ಸರಿಯಲ್ಲ ಎಂದ ಅವರು, ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭದಲ್ಲಿ, ಇಂದಿರಾ ಗಾಂಧಿಯವರ ಹತ್ಯೆಯಾದ ಬಳಿಕ ನಡೆದ ಹತ್ಯಾಕಾಂಡ ಮತ್ತು ದೆಹಲಿಯಲ್ಲಿ ಸಿಖ್ ರ ಸಾಮೂಹಿಕ ಹತ್ಯೆ ಖಂಡಿಸಿ ಎಷ್ಟು ಮಂದಿ ಸಾಹಿತಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ಪ್ರಶ್ನಿಸಿದರು.

ಮುಸಲ್ಮಾನರು ಗೋಮಾಂಸ ತಿನ್ನುವುದನ್ನು ಬಿಡಬೇಕೆಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟಾರ್ ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.