ಮಧ್ಯಪ್ರದೇಶ ನೇಮಕಾತಿ ಹಗರಣ: ದಿಗ್ವಿಜಯ್ ಸಿಂಗ್ ವಿಚಾರಣೆ
ಮಧ್ಯಪ್ರದೇಶ ಅಸೆಂಬ್ಲಿ ಸೆಕ್ರೆಟರಿಯಟ್ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಜನರಲ್ ಸೆಕ್ರೆಟರಿ ದಿಗ್ವಿಜಯ್ ಸಿಂಗ್ ಅವರನ್ನು ಸತತ ಐದು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು...

ಭೋಪಾಲ್: ಮಧ್ಯಪ್ರದೇಶ ಅಸೆಂಬ್ಲಿ ಸೆಕ್ರೆಟರಿಯಟ್ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಜನರಲ್ ಸೆಕ್ರೆಟರಿ ದಿಗ್ವಿಜಯ್ ಸಿಂಗ್ ಅವರನ್ನು ಸತತ ಐದು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು.
19932003ರ ಅವಧಿಯಲ್ಲಿ ಅವರು ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ ಈ ಹಗರಣ ನಡೆದಿತ್ತು. ಜಹಂಗಿರಾಬಾದ್‍ನ ಎಸ್ಪಿ ಸಲೀಮï ಖಾನ್ ಅವರು ದಿಗ್ವಿಜಯ್ ಸಿಂಗ್ ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಕೇಳಲಾದ 250 ಪ್ರಶ್ನೆಗಳಿಗೆ ಉತ್ತರಿಸಿದ ಸಿಂಗ್ ಎಲ್ಲ ನೇಮಕಾತಿಗಳೂ ಕ್ಯಾಬಿನೆಟ್ ಅನುಮೋದನೆಯ ನಂತರವೇ ಆಗಿದೆ ಎಂದೇ ಪುನರುಚ್ಚರಿಸಿದ್ದಾರೆ ಎನ್ನಲಾಗಿದೆ. ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆಗೆ ಅವರು ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


