ಪ್ರಧಾನಿ ಮೋದಿ ವಿವಾಹ, ಅರ್ಜಿ ವಜಾಗೊಳಿಸಿದ ಸುಪ್ರಿಂಕೋರ್ಟ್
ಪ್ರಧಾನಿ ನರೇಂದ್ರ ಮೋದಿ ಅವರ ವಿವಾಹದ ವಿಷಯವನ್ನು ರಹಸ್ಯವಾಗಿಟ್ಟಿದ್ದಕ್ಕೆ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿವಾಹದ ವಿಷಯವನ್ನು ರಹಸ್ಯವಾಗಿಟ್ಟಿದ್ದಕ್ಕೆ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಅಹ್ಮದಾಬಾದ್ ನಿವಾಸಿ ನಿಶಾಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ವಜಾಗೊಳಿಸಿದೆ.
ಗುಜರಾತ್ ಹೈ ಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿ ವಜಾಗೊಂಡ ನಂತರ, ನಿಶಾಂತ್ ಶರ್ಮಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ನ್ಯಾ.ಜೆ.ಚೆಲಮೇಶ್ವರ್ ಅವರ ನೇತೃತ್ವದ ಪೀಠವೂ ವಿಚಾರಣೆ ನಡೆಸಲು ನಿರಾಕರಿಸಿದೆ.
ನರೇಂದ್ರ ಮೋದಿ ವಿವಾಹದ ವಿಷಯವನ್ನು ಬಚ್ಚಿಟ್ಟಿದ್ದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅರ್ಜಿಯೂ ಸಲ್ಲಿಕೆಯಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ಶುಕ್ರವಾರ ತಳ್ಳಿ ಹಾಕಿದೆ.
2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುವಾಗ ಅಫಿಡವಿಟ್‌ನಲ್ಲಿ, ಮೋದಿ ತಮ್ಮ ಪತ್ನಿ ಹೆಸರನ್ನು ನಮೂದಿಸಿದ ಕಾರಣ ದುರು ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


