ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: 15 ಸಾವು, 18 ಗಾಯ
ಮದುವೆ ದಿಬ್ಬಣ ಹೊತ್ತು ಸಾಗುತ್ತಿದ್ದ ಲಾರಿ-ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 18 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ...

ಓಂಗೊಲ್: ಮದುವೆ ದಿಬ್ಬಣ ಹೊತ್ತು ಸಾಗುತ್ತಿದ್ದ ಲಾರಿ-ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 18 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಪ್ರಕಾಶಂ ಜಿಲ್ಲೆಯ ಕುಂಡುಕೂರು ನಗರದಲ್ಲಿ ಶನಿವಾರ ನಡೆದಿದೆ.
40 ಮಂದಿಯನ್ನು ಹೊತ್ತ ಲಾರಿಯೊಂದು ಮದುವೆ ದಿಬ್ಬಣಕ್ಕೆ ಕುಂದೂಕೂರಿನಿಂದ ಹೈದರಾಬಾದ್ ಗೆ ಸಾಗುತ್ತಿತ್ತು. ಈ ವೇಳೆ ಲಾರಿಗೆ ಎದುರಾದ ಖಾಸಗಿ ಬಸ್ ವೊಂದು ಲಾರಿಗೆ ಮುಖಾಮುಖಿಯಾಗಿದೆ. ಘಟನೆ ವೇಳೆ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಮಂದಿ ಗಂಭೀರವಾಗಿ ಗೊಂಡಿದ್ದಾರೆ. ಲಾರಿಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಖಾಸಗಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆ ವೇಳೆ ಪ್ರಯಾಣಿಕರಾರು ಬಸ್ ನಲ್ಲಿರಲಿಲ್ಲ ಎಂಬುದು ತಿಳಿದುಬಂದಿದ್ದು, ಅಪಘಾತ ನಡೆಯುತ್ತಿದ್ದಂತೆ ಬಸ್ ನಲ್ಲಿದ್ದ ಚಾಲಕ ಹಾಗೂ ಸಹಾಯಕ ಕಾಲ್ಕಿತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಪ್ರಸ್ತುತ ಘಟನಾ ಸ್ಥಳಕ್ಕೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


