ಶಿವಸೇನೆ ಜೊತೆ ಐದು ವರ್ಷ ಸರ್ಕಾರ ಪೂರ್ಣ: ದೇವೇಂದ್ರ ಫಡ್ನವೀಸ್
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸರಕಾರವು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ...

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸರಕಾರವು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಉದ್ಧವ್ ಠಾಕ್ರೆ ಅವರು ಅ.22ರಂದು ಫಡ್ನವೀಸ್ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುತ್ತಾರೆ ಎಂಬ ವದಂತಿಯನ್ನು ತಳ್ಳಿಹಾಕಿದ ಫಡ್ನವೀಸ್, ತಮ್ಮ ಸರಕಾರ ಶಿವಸೇನೆಯಜೊತೆ 5 ವರ್ಷಗಳನ್ನು ಪೂರ್ಣಗೊಳಿಸುವುದು ಖಚಿತವೆಂದು ಹೇಳಿದರು.
"ಮಹಾರಾಷ್ಟ್ರ ಸರಕಾರದಲ್ಲಿ ಬಿಜೆಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಬೇರ್ಪಡುವಂತಹ ಯಾವುದೇ ಪರಿಸ್ಥಿತಿ ಇಲ್ಲ. ಈ ಬಗ್ಗೆ ನನಗೆ ಶೇ.ನೂರು ವಿಶ್ವಾಸವಿದೆ. ನಮ್ಮ ಸರಕಾರವು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದೆಂಬ ವಿಶ್ವಾಸವೂ ನನಗಿದೆ' ಎಂದು ಫಡ್ನವೀಸ್ ಭರವಸೆ ವ್ಯಕ್ತ ಪಡಿಸಿದರು.
ಪಾಕಿಸ್ತಾನ ಗಾಯಕ ಗುಲಾಂ ಅಲಿ ಅವರ ಮುಂಬಯಿಯಲ್ಲಿನ ಸಂಗೀತ ಕಾರ್ಯಕ್ರಮವನ್ನು ರದ್ದು ಪಡಿಸುವಲ್ಲಿ ಶಿವಸೇನೆ ಯಶಸ್ವಿಯಾಗಿತ್ತಲ್ಲದೇ ಆ ಬಳಿಕ ಪಾಕ್ ಮಾಜಿ ವಿದೇಶ ಸಚಿವ ಮಹಮೂದ್ ಕಸೂರಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಓಆರ್‌ಎಫ್ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿತ್ತು. ಈ ಎರಡು ಕಾರಣಗಳಿಂದಾಗಿ ತೀವ್ರ ಮುಜುಗರಕ್ಕೊಳಗಾಗಿದ್ದ ಮಹಾರಾಷ್ಟ್ರ ಸರಕಾರದಿಂದ ಶಿವಸೇನೆಯು ಹೊರ ನಡೆಯುವುದೆಂಬ ಊಹಾಪೋಹಗಳು ಗರಿಗೆದರಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


