ಎನ್‌ಜೆಎಸಿ ವಿಚಾರದಲ್ಲಿ ಬಿಜೆಪಿಯನ್ನು ಬೆಂಬಲಿಸುವುದಿಲ್ಲ: ಕಾಂಗ್ರೆಸ್
ಎನ್‌ಜೆಎಸಿ ಕಾಯ್ದೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ ಹೇಳಿದ್ದಾರೆ..

ನವದೆಹಲಿ : ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ(ಎನ್‌ಜೆಎಸಿ) ಕಾಯ್ದೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ನ್ಯಾಯಾಂಗ ಸೇರಿದಂತೆ ಎಲ್ಲ ಆಡಳಿತಾತ್ಮಕ ವ್ಯವಸ್ಥೆಗಳನ್ನು ಬುಡಮೇಲು ಮಾಡಲು ನರೇಂದ್ರ ಮೋದಿ ಸರ್ಕಾರ ಯತ್ನಿಸುತ್ತಿದೆ. ದೇಶದಲ್ಲಿ ಸರ್ಕಾರದ ಬಗೆಗಿನ ವಿಶ್ವಾಸಾರ್ಹತೆ ನೆಲಕಚ್ಚಿದೆ ಎಂದು ಆರೋಪಿಸಿದ್ದಾರೆ.
‘ಎನ್‌ಜೆಎಸಿ ವಿಚಾರದಲ್ಲಿ ಬಿಜೆಪಿಯನ್ನು ಬೆಂಬಲಿಸುವುದಿಲ್ಲ. ಆದರೆ, ಕೊಲಿಜಿಯಂ ವ್ಯವಸ್ಥೆ ಸ್ವೀಕಾರಾರ್ಹವೇ ಅಥವಾ ಸ್ವೀಕಾರಾರ್ಹವಲ್ಲವೇ ಎಂಬುದರ ಬಗ್ಗೆ ಪಕ್ಷ ಸಧ್ಯ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದಿದ್ದಾರೆ. ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನು ನೇಮಕ ಮಾಡುವುದಕ್ಕೆ ಎನ್‌ಡಿಎ ಸರ್ಕಾರ ಜಾರಿಗೆ ತಂದಿದ್ದ ಎನ್‌ಜೆಎಸಿ ಕಾಯ್ದೆಯನ್ನು ರದ್ದು ಮಾಡಿ ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿ ಈ ಕಾಯ್ದೆ ‘ಅಸಾಂವಿಧಾನಿಕ’ ಎಂದು ಹೇಳಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


