ಬಿಸಿಸಿಐ ಕಚೇರಿಗೆ ಮುತ್ತಿಗೆ: ಶಿವಸೇನೆಯ 10 ಕಾರ್ಯಕರ್ತರ ಬಂಧನ
ಪಾಕಿಸ್ತಾನ ಜೊತೆಗೆ ಕ್ರಿಕೆಟ್ ಸರಣಿ ನಡೆಸಲು ಮುಂದಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಚೇರಿಗೆ ಮುತ್ತಿಗೆ ಹಾಕಿದ್ದ ಶಿವಸೇನೆಯ 10...

ಮುಂಬೈ: ಪಾಕಿಸ್ತಾನ ಜೊತೆಗೆ ಕ್ರಿಕೆಟ್ ಸರಣಿ ನಡೆಸಲು ಮುಂದಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಚೇರಿಗೆ ಮುತ್ತಿಗೆ ಹಾಕಿದ್ದ ಶಿವಸೇನೆಯ 10 ಕಾರ್ಯಕರ್ತರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಬಿಸಿಸಿಐ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ, ಭಿತ್ತಿಚಿತ್ರ ಪ್ರದರ್ಶಿಸಿ ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಶಿವಸೇನೆ ಕಾರ್ಯಕರ್ತರ ಬಂಧಿಸಿ, ಅವರ ವಿರುದ್ಧ ಐಪಿಸಿ ಸೆಕ್ಷನ್ 141, 143, 149 ಅಡಿ ಕೇಸ್ ದಾಖಲಿಸಿದ್ದಾರೆ.
ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಅವರಿಗೂ ಮುತ್ತಿಗೆ ಹಾಕಿದ್ದ ಶಿವಸೇನೆ ಕಾರ್ಯಕರ್ತರು, ಅವರಿಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು. ಅಲ್ಲದೆ ಯಾವುದೇ ಕಾರಣಕ್ಕೂ ಭಾರತ ಪಾಕ್ ನಡುವೆ ಕ್ರಿಕೆಟ್ ಸರಣಿ ಆಯೋಜಿಸ ಬಾರದು ಎಂದು ಒತ್ತಾಯಿಸಿದ್ದರು.
ಭಾರತ-ಪಾಕ್ ಕ್ರಿಕೆಟ್ ಸರಣಿ ನಡೆಸುವ ಸಲುವಾಗಿ ಶಶಾಂಕ್ ಮನೋಹರ್ ಮತ್ತು ಶಹರಿಯಾರ್ ಖಾನ್ ಅವರ ಮಾತುಕತೆ ನಿಗದಿಯಾಗಿತ್ತು. ಆದರೆ ಶಿವಸೇನೆ ಕಾರ್ಯಕರ್ತರು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪಿಸಿಬಿ-ಬಿಸಿಸಿಐ ಸಭೆಯನ್ನು ನಾಳೆ ದೆಹಲಿಯ ಬಿಸಿಸಿಐ ಕಚೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ .
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


