ದಾದ್ರಿ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ
ಗೋಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ...

ಲಖನೌ: ಗೋಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ.
ದಾದ್ರಿ ಪ್ರಕರಣ ಇಡೀ ದೇಶದಾದ್ಯಂತ ಸಾಕಷ್ಟು ವಿವಾದಗಳನ್ನೇ ಸೃಷ್ಟಿಸಿತ್ತು, ಘಟನೆ ಕುರಿತಂತೆ ಆರೋಪಿಗಳ ಬಂಧನಕ್ಕಾಗಿ ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದರಂತೆ ಈ ವರೆಗೂ 9 ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದರು. ಇದೀಗ ಬಂಧನಕ್ಕೊಳಗಾಗಿರುವುದು 10ನೇ ಆರೋಪಿ ಹರಿ ಓಂ ಎಂದು ಹೇಳಲಾಗುತ್ತಿದ್ದು, ಈತ ಘಟನೆ ನಂತರ ಸಂಬಂಧಿಕರೊಬ್ಬನ ಮನೆಯಲ್ಲಿ ಅಡಗಿಕೊಂಡಿದ್ದ ಎಂದು ತಿಳಿದುಬಂದಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಅಧಿಕಾರಿ ಅನುರಾಗ್ ಸಿಂಗ್ ಅವರು, ಬಂಧಿತ ಹರಿ ಓಂ ಪ್ರಕರಣದ 10ನೇ ಆರೋಪಿಯಾಗಿದ್ದಾನೆ. ತನಿಖೆ ವೇಳೆ ಆರೋಪಿ ಹರಿ ಓಂ ಮೊಬೈಲ್ ಸಂಖ್ಯೆ ದೊರೆತಿತ್ತು. ಹೀಗಾಗಿ ಮೊಬೈಲ್ ನಂಬರ್ ನ್ನು ಟ್ರೇಸ್ ಮಾಡುವ ಮೂಲಕ ಆತನಿರುವ ಸ್ಥಳದ ಬಗ್ಗೆ ಮಾಹಿತಿ ಸಿಕ್ಕಿತು. ಈ ಮಾಹಿತಿ ಅನ್ವಯ ಹರಿ ಓಂನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ದಾದ್ರಿ ಬಳಿಯ ಬಿಶಾಡಾ ಗ್ರಾಮದಲ್ಲಿರುವ ಮುಸ್ಲಿಂ ಕುಟುಂಬವೊಂದು ಮನೆಯಲ್ಲಿ ಗೋಮಾಂಸವಿಟ್ಟುಕೊಂಡಿದ್ದಾರೆ ಎಂಬ ಶಂಕೆ ಹಿನ್ನೆಲೆ ಮನೆಗೆ ನುಗ್ಗಿದ ಉದ್ರಿಕ್ತ ಗುಂಪೊಂದು ಮೊಹಮ್ಮದ್ ಅಖ್ಲಾಕ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿತ್ತು. ಈ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಈ ನಡುವೆ ಉತ್ತರ ಪ್ರದೇಶ ಪೊಲೀಸರು ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧನಕ್ಕೊಳಪಡಿಸಿ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


