ವಿಧ್ವಂಸಕ ಕೃತ್ಯವೆಸಗುವ ಬದಲು ಚರ್ಚೆಯಲ್ಲಿ ಪಾಲ್ಗೊಳ್ಳಿ: ಅರುಣ್ ಜೇಟ್ಲಿ
ದೇಶದಲ್ಲಿ ಶಾಂತ ಕದಡುವ ಘಟನೆಗಳು ಸಾಕಷ್ಟು ನಡೆಯುತ್ತಿದ್ದು, ವಿಧ್ವಂತಕ ಕೃತ್ಯವೆಸಗುವ ಬದಲು ಚರ್ಚೆಗಳಲ್ಲಿ ಪಾಲ್ಗೊಳ್ಳಿ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ದೇಶದಲ್ಲಿ ಶಾಂತ ಕದಡುವ ಘಟನೆಗಳು ಸಾಕಷ್ಟು ನಡೆಯುತ್ತಿದ್ದು, ವಿಧ್ವಂತಕ ಕೃತ್ಯವೆಸಗುವ ಬದಲು ಚರ್ಚೆಗಳಲ್ಲಿ ಪಾಲ್ಗೊಳ್ಳಿ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ.
ದಾದ್ರಿಯ ಮುಸ್ಲಿಂ ವ್ಯಕ್ತಿ ಹತ್ಯೆ, ಸುಧೀಂದ್ರ ಕುಲಕರ್ಣಿ, ಸಾಹಿತಿಗಳ ಹತ್ಯೆ ಖಂಡಿಸಿ ಪ್ರಶಸ್ತಿ ಮರಳಿಸುವಕೆಯಂತಹ ಪ್ರಕರಣಗಳು ದೇಶದೆಲ್ಲೆಡೆ ಸಾಕಷ್ಟು ಸದ್ದು ಮಾಡಿತ್ತು. ಪ್ರಕರಣ ಸಂಬಂಧ ಈ ವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಮೌನ ತಾಳಿದ್ದ ಅರುಣ್ ಜೇಟ್ಲಿ ಅವರು ಇದೀಗ ತಮ್ಮ ಮೌನವನ್ನು ಮುರಿದಿದ್ದು, ಶಾಂತ ಕದಡುವ ವಿಧ್ವಂತಕ ಕೃತ್ಯವೆಸಗುವ ಬದಲು ಚರ್ಚೆಯಲ್ಲಿ ಪಾಲ್ಗೊಳ್ಳಿ ಹೇಳಿದ್ದಾರೆ.
ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಈ ರೀತಿಯ ಘಟನೆಗಳು ನಿಜಕ್ಕೂ ಗಂಭೀರ ವಿಷಯಗಳಾಗಿದ್ದು, ಈ ಘಟನೆಗಳು ಅಂತರ್ ಸಮುದಾಯಗಳ ನಡುವಿನ ಸಂಬಂಧಗಳನ್ನು ಹಾಳು ಮಾಡುತ್ತದೆ. ಇನ್ನು ಕೆಲವು ಘಟನೆಗಳು ಸೂಕ್ಷ್ಮ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಘಟನೆಯನ್ನು ಹಿಡಿದು ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನೆಗುವ ಬದಲು ವಿಷಯವನ್ನಿಡಿದು ಚರ್ಚೆಯನ್ನು ನಡೆಸಿ. ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನು ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣ ಸಂಬಂಧ ಪ್ರಧಾನಮಂತ್ರಿ ಸಹ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೆ, ನಾಯಕರೂ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


