ದೆಹಲಿ ಪೊಲೀಸ್ ಇಲಾಖೆಯನ್ನು ನಮ್ಮ ವ್ಯಾಪ್ತಿಗೆ ನೀಡಿ: ಮೋದಿ ಗೆ ಕೇಜ್ರಿವಾಲ್ ಬೇಡಿಕೆ
ದೆಹಲಿ ಪೊಲೀಸರನ್ನು ಅತಿ ಭ್ರಷ್ಟರೆಂದು ಹೇಳಿರುವ ಅರವಿಂದ್ ಕೇಜ್ರಿವಾಲ್, ದೆಹಲಿ ಪೊಲೀಸರನ್ನು ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ನವದೆಹಲಿ: ದೆಹಲಿ ಪೊಲೀಸರನ್ನು ಅತಿ ಭ್ರಷ್ಟರೆಂದು ಹೇಳಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ಪೊಲೀಸರನ್ನು ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಪ್ಪಿಸಿದ ಒಂದು ವರ್ಷದಲ್ಲಿ ಎಲ್ಲವನ್ನೂ ಸರಿ ಮಾಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ಮೋದಿ ಜಿ ಹಠಮಾರಿಯಾಗಬೇಡಿ ನಮ್ಮೊಂದಿಗೆ ಕೆಲಸ ಮಾಡಿ, ಭ್ರಷ್ಟಾಚಾರ ನಿಗ್ರಹ ದಳ ಹಾಗೂ ದೆಹಲಿ ಪೊಲೀಸರನ್ನು ರಾಜ್ಯ ಸರ್ಕಾರಕ್ಕೆ ಒಪ್ಪಿಸಿ, ನಾವು ಒಂದು ವರ್ಷದೊಳಗೆ ಎಲ್ಲವನ್ನೂ ಸರಿ ಮಾಡುತ್ತೇವೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಸಿಎಂಎಸ್ ಸಮೀಕ್ಷೆಯನ್ನು ಉಲ್ಲೇಖಿಸಿರುವ ಕೇಜ್ರಿವಾಲ್, ಸಮೀಕ್ಷೆಯ ಪ್ರಕಾರ ಪ್ರಧಾನಿ ಮೋದಿ ಹಾಗೂ ಅವರ ಲೆಫ್ಟಿನೆಂಟ್ ಗೌರ್ನರ್ ನ ಅಡಿಯಲ್ಲಿರುವ ದೆಹಲಿ ಪೊಲೀಸರು ಅತಿ ಭ್ರಷ್ಟರೆಂದು ತಿಳಿದುಬಂದಿದೆ. ಆದರೆ ಆಮ್ ಆದ್ಮಿ ನೇತೃತ್ವದ ಸರ್ಕಾರದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತಿದೆ ಎಂದು ಸಮೀಕ್ಷೆ ಹೇಳಿದೆ. ಇದು ದೆಹಲಿ ಸರ್ಕಾರದ ಸಾಮರ್ಥ್ಯವನ್ನು ಸಾಬೀತುಪಡಿಸುತ್ತದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


