ಮೊಬೈಲ್‌ಗಳಿಂದಾಗಿಯೇ ಅತ್ಯಾಚಾರ ಪ್ರಕರಣಗಳ ಹೆಚ್ಚಳ: ಅಜಂ ಖಾನ್
ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಮೊಬೈಲ್ ಫೋನುಗಳೇ ಕಾರಣ ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹೇಳಿದ್ದಾರೆ...

Published On :
ನವದೆಹಲಿ: ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಮೊಬೈಲ್ ಫೋನುಗಳೇ ಕಾರಣ ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹೇಳಿದ್ದಾರೆ.
ಮೊಬೈಲ್ ಫೋನುಗಳಲ್ಲಿ ಅಶ್ಲೀಲ ಚಿತ್ರಗಳು ದೊರೆಯುವುದರಿಂದ ಸಣ್ಣಪುಟ್ಟ ಮಕ್ಕಳನ್ನು ಬಿಡದ ಕಾಮುಕರು ಅತ್ಯಾಚಾರ ನಡೆಸುತ್ತಿದ್ದಾರೆ. ಇದರಿಂದ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಅಜಂ ಖಾನ್ ಹೇಳಿದ್ದು ಇದೀಗ ವಿವಾದಕ್ಕೆ ಗುರಿಯಾಗಿದೆ.
ಎರಡುವರೆ ವರ್ಷದ ಮಕ್ಕಳೆಲ್ಲಾ ಅತ್ಯಾಚಾರಕ್ಕೊಳಗಾಗುತ್ತಿದ್ದಾರೆ ಯಾಕೆ? ಯಾಕೆಂದರೆ, ಮೊಬೈಲ್ ಫೋನ್ ಗಳಲ್ಲಿ ಸಿಗುತ್ತಿರುವ ಅಶ್ಲೀಲ ಮೂವಿಗಳು. ಗ್ರಾಮಗಳಲ್ಲೂ ಸಹ ಇಂತಹ ಮೂವಿಗಳನ್ನು ಸುಲಭವಾಗಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಅಜಂ ಖಾನ್ ಹೇಳಿದ್ದಾರೆ.
ಕಳೆದವಾರ ದೆಹಲಿಯ ನಂಗೋಲಿಯಲ್ಲಿ 2.5 ವರ್ಷದ ಮಗುವೊಂದು ಅತ್ಯಾಚಾರಕ್ಕೊಳಗಾದ ಹಿನ್ನೆಲೆಯಲ್ಲಿ ಅಝಂಖಾನ್ ಈ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


