ದೇಶ

ಹತಾಶೆಯಿಂದಾಗಿ ಪಾಕ್ ಸೇನೆ ಭಾರತದತ್ತ ಗುಂಡಿನ ದಾಳಿ ನಡೆಸುತ್ತಿದೆ: ನಖ್ವಿ

ಅಂತಾರಾಷ್ಟ್ರೀಯ ಗಡಿರೇಖೆಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತದತ್ತ ಗುಂಡಿನ ದಾಳಿ ನಡೆಸುತ್ತಿರುವುದು ಪಾಕಿಸ್ತಾನದ...

ಹತಾಶೆಯಿಂದಾಗಿ ಪಾಕ್ ಸೇನೆ ಭಾರತದತ್ತ ಗುಂಡಿನ ದಾಳಿ ನಡೆಸುತ್ತಿದೆ: ನಖ್ವಿ
ಮುಕ್ತಾರ್ ಅಬ್ಬಾಸ್ ನಖ್ವಿ
Published On :
ಅಲಹಾಬಾದ್: ಅಂತಾರಾಷ್ಟ್ರೀಯ ಗಡಿರೇಖೆಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತದತ್ತ ಗುಂಡಿನ ದಾಳಿ ನಡೆಸುತ್ತಿರುವುದು ಪಾಕಿಸ್ತಾನದ ಹತಾಶೆಯನ್ನು ಸೂಚಿಸುತ್ತದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. 
ಭಾರತ ಶಾಂತಿಯ ಮಂತ್ರ ಪಠಿಸುತ್ತದೆ. ಆದರೆ ಪಾಕಿಸ್ತಾನ ಭಯೋತ್ಪಾದನೆಯೊಂದಿಗೆ ಬೆಸೆದುಕೊಂಡಿದೆ. ಹೀಗಾಗಿ ಶಾಂತಿ ಮತ್ತು ಭಯೋತ್ಪಾದನೆ ಒಟ್ಟಾಗಿ ಹೋಗಲು ಸಾಧ್ಯವಿಲ್ಲ ಎಂದು ನಖ್ವಿ ಹೇಳಿದ್ದಾರೆ. 
ಅಲ್ಲದೆ ಪಾಕಿಸ್ತಾನ ಭಯೋತ್ಪಾದಕರನ್ನು ನಿರ್ಮಿಸುವ ಕಾರ್ಖಾನೆಯಾಗಿದೆ. ಇದರಿಂದಾಗಿಯೇ ಪಾಕ್ ನಲ್ಲಿ ವಿಘಟನೆಗಳು ನಡೆಯುತ್ತಿವೆ ಎಂದರು.
ಪಾಕಿಸ್ತಾನ ಸೇನೆ ನಡೆಸುತ್ತಿರುವ ಗುಂಡಿನ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಸಹ ತಕ್ಕ ಉತ್ತರ ನೀಡುತ್ತಿದೆ ಎಂದು ನಖ್ವಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.