ದೆಹಲಿಯಲ್ಲಿ ಈ ವರ್ಷ 1000 ಕ್ಕೂ ಹೆಚ್ಚು ಬಾಲಾಪರಾಧಿಗಳ ಬಂಧನ
ದೆಹಲಿಯಲ್ಲಿ ಅತ್ಯಾಚಾರದಂತಹ ಘೋರ ಅಪರಾಧಗಳು ಹೆಚ್ಚುತ್ತಿದ್ದು, ಅಪರಾಧಗಳನ್ನು ಎಸಗುತ್ತಿರುವ ಬಾಲಾಪರಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ.

ನವದೆಹಲಿ: ದೆಹಲಿಯಲ್ಲಿ ಅತ್ಯಾಚಾರದಂತಹ ಘೋರ ಅಪರಾಧಗಳು ಹೆಚ್ಚುತ್ತಿದ್ದು, ಅಪರಾಧಗಳನ್ನು ಎಸಗುತ್ತಿರುವ ಬಾಲಾಪರಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ.
2014 ಕ್ಕಿಂತ 2015 ರಲ್ಲಿ ಬಾಲಾಪರಾಧಿಗಳ ಸಂಖ್ಯೆ ಹೆಚ್ಚಾಗಿದ್ದು ಘೋರ ಅಪರಾಧಗಳೆಸಗಿರುವ 100 ಬಾಲಾಪರಾಧಿಗಳನ್ನು ಬಂಧಿಸಿದ್ದಾರೆ. 17 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಅಪ್ರಾಪ್ತರು ಕೆಲ ದಿನಗಳ ಹಿಂದೆ ಎರಡು ವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದರು. ಡಿಸೆಂಬರ್ 16 2012 ರಂದು ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದ ಬಾಲಾಪರಾಧಿಗೆ ಕಠಿಣ ಶಿಕ್ಷೆ ವಿಧಿಸದೇ ಇರುವುದು ಕಾನೂನಿನ ವ್ಯಂಗ್ಯವೆಂದೇ ಅಸಮಾಧಾನ ವ್ಯಕ್ತವಾಗಿದ್ದು ಬಾಲಾಪರಾಧ ಹೆಚ್ಚುತ್ತಲೇ ಇದೆ.
ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಪ್ರಕಟವಾಗಿರುವ ವರದಿ ಪ್ರಕಾರ 2007 ರಲ್ಲಿ 14 ವರ್ಷದವನಾಗಿದ್ದ ಆಕಾಶ್ ಎಂಬ ಅಪ್ರಾಪ್ತ ಸಹಪಾಠಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಆಕಾಶ್ ಎಂಬಾತ ಎಂಟು ವರ್ಷಗಳ ಬಳಿಕ ಮತ್ತೆ ಇಂಥದ್ದೇ ಹೀನಕೃತ್ಯ ನಡೆಸಿದ್ದು ತನ್ನ ಸ್ನೇಹಿತನ ಮೇಲೆ ಗುಂಡಿನ ದಾಳಿ ನಡೆಸಿ 15 ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದಾನೆ.
ದೆಹಲಿಯಲ್ಲಿ ಬಾಲಾಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಾಲಾಪರಾಧಿಗಳ ವಯಸ್ಸನ್ನು 18 ರಿಂದ 16 ಕ್ಕೆ ಇಳಿಸಬೇಕು ಎಂದು ದೆಹಲಿಯ ಶಾಸಕರು ಹಾಗೂ ಕಾನೂನು ಜಾರಿ ಸಂಸ್ಥೆಗಳು ಒತ್ತಾಯಿಸುತ್ತಿವೆ. ಆದರೆ ಇದಕ್ಕೆ ಮಕ್ಕಳ ಹಕ್ಕುಗಳ ಚಳವಳಿಗಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


