ಆರು ದಿನದಲ್ಲಿ ಮೋದಿ 17 ರ್ಯಾಲಿ
ಬಿಹಾರ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿರುಸಿನ ಪ್ರಚಾರ ನಡೆಸಲು ನಿರ್ಧರಿಸಿದ್ದಾರೆ...

ಪಾಟ್ನಾ: ಬಿಹಾರ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿರುಸಿನ ಪ್ರಚಾರ ನಡೆಸಲು ನಿರ್ಧರಿಸಿದ್ದಾರೆ.
ಭಾನುವಾರದಿಂದ ಆರು ದಿನಗಳ ಕಾಲ ಮೋದಿ ಅವರು ದಾಖಲೆಯ 17 ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಿಹಾರ ವಿಧಾನಸಭೆಗೆ ಒಟ್ಟು ಐದು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಎರಡು ಹಂತದ ಮತದಾನ ಪೂರ್ಣಗೊಂಡಿದೆ. ಮೂರನೇ ಹಂತದ ಮತದಾನವು ಇದೇ ತಿಂಗಳಾಂತ್ಯದಲ್ಲಿ ನಡೆಯಲಿದೆ. ಮೊದಲ ಎರಡು ಹಂತದಲ್ಲಿ ಮೋದಿ 9 ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ. ಆದರೆ, ಬಿಜೆಪಿಗೆ ಹಿನ್ನಡೆ ಆಗುತ್ತಿರುವ ಆತಂಕದ ಹಿನ್ನೆಲೆಯಲ್ಲಿ ಬಿಜೆಪಿಯು ಪ್ರಧಾನಿ ಅವರ ರ್ಯಾಲಿಗಳ ಸಂಖ್ಯೆಯನ್ನು ಹೆಚ್ಚಿಸಿದೆ.
ದಲಿತರ ಹತ್ಯೆ ಮೋದಿ ಮೌನಕ್ಕೆ ಆಕ್ರೋಶ: ನಿತೀಶ್ ಕುಮಾರ್ ಅವರು ಪ್ರಧಾನಿ ಮೋದಿ ಅವರ ವಿರುದ್ಧ ಮತ್ತೊಮ್ಮೆ ತಿರುಗಿ ಬಿದ್ದಿದ್ದಾರೆ. ಹರ್ಯಾಣದಲ್ಲಿ ದಲಿತ ಮಕ್ಕಳಿಬ್ಬರ ಹತ್ಯೆ ನಡೆದು ನೂರು ಗಂಟೆಗಳಾಗಿವೆ. ಇಷ್ಟಾದರೂ ಮೋದಿ ಅವರು ಆ ಕುರಿತು ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ನಿತೀಶ್ ಹೇಳಿದ್ದಾರೆ. ಬಿಜೆಪಿಗೆ ಗೆಲುವು ಖಚಿತ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಗಲಿದೆ. ಬಿಜೆಪಿ ಗೆಲುವಿನಿಂದಾಗಿ ಕೇಂದ್ರ ಹಾಗೂ ಬಿಹಾರ ಎರಡಕ್ಕೂ ಅನುಕೂಲವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಎರಡೂ ಹಂತದ ಚುನಾವಣೆಯಲ್ಲಿ ಬಿಜೆಪಿಯನ್ನು ಜನ ಬೆಂಬಲಿಸಿದ್ದಾರೆ. ಕೆಲವು ಕಡೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ ಎನ್ನುವ ಸ್ಥಿತಿ ಇದೆ ಎಂದು ಜೇಟ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


