ದೇಶ

ಉ.ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಜಂ ಖಾನ್ ಜೈಲಿಗೆ: ಸಂಗೀತ್ ಸೋಮ್

2017ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಚಿವ ಅಜಂ ಖಾನ್ ಜೈಲಿಗೆ ಹೋಗಬೇಕಾಗುತ್ತದೆ ಎಂದು ಬಿಜೆಪಿ...

ಉ.ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಜಂ ಖಾನ್ ಜೈಲಿಗೆ: ಸಂಗೀತ್ ಸೋಮ್
ಸಂಗೀತ್ ಸೋಮ್
Published On :
ಬುಲಂದ್ ಶಹರ್: 2017ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಚಿವ ಅಜಂ ಖಾನ್ ಜೈಲಿಗೆ ಹೋಗಬೇಕಾಗುತ್ತದೆ ಎಂದು ಬಿಜೆಪಿ ನಾಯಕ ಸಂಗೀತ್ ಸೋಮ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪಂಜಾಯತ್ ಚುನಾವಣೆ ಹಿನ್ನೆಲೆಯಲ್ಲಿ ಜಹಂಗಿರಾಬಾದ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಗೀತ್ ಸೋಮ್, ಸಮಾಜವಾದಿ ಪಕ್ಷದ ಆಡಳಿತವಧಿಯಲ್ಲಿ ಉತ್ತರಪ್ರದೇಶದಲ್ಲಿ 400ಕ್ಕೂ ಹೆಚ್ಚು ಕೋಮುಗಲಭೆಗಳು ನಡೆದಿದೆ. ಹೀಗಾಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಜಂ ಖಾನ್ ರನ್ನ ಜೈಲಿಗೆ ಕಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ಅಕ್ಟೋಬರ್ 29 ರಂದು ಪಂಚಾಯತ್ ಚುನಾವಣೆ ನಡೆಯಲಿದ್ದು, ಜಿಲ್ಲಾ ಪಂಚಾಯತಿ ಸದಸ್ಯರ ಪರ ಸಂಗೀತ್ ಸೋಮ್ ಚುನಾವಣಾ ಪ್ರಚಾರ ರ್ಯಾಲಿ ನಡೆಸುತ್ತಿದ್ದಾರೆ.
ದಾದ್ರಿ ಪ್ರಕರಣದ ನಂತರ ಗೋಹತ್ಯೆ ಮಾಡಿದವರಿಗೆ ಸರ್ಕಾರ ಸತ್ಕಾರ ಮಾಡುತ್ತಿದೆ ಎನ್ನುವ ಮೂಲಕ ವಿವಾದಕ್ಕೊಳಗಾಗಿದ್ದ ಸಂಗೀತ್ ಸೋಮ್ ಅವರು ಬಿಜೆಪಿ ಅಧ್ಯಕ್ಷ ಅಮಿತ್ ಶಾರಿಂದ ಕಿವಿ ಹಿಂಡಿಸಿಕೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.