ದ್ವೇಷದ ಅಪರಾಧಗಳಿಗೆ ಕೋರ್ಟ್ ಕಠಿಣ ಶಿಕ್ಷೆ ನೀಡುತ್ತೆ: ನ್ಯಾ.ಎಚ್.ಎಲ್ ದತ್ತು
ದೇಶದಲ್ಲಿ ದ್ವೇಷ ಸಂಬಂಧಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಅಂಥಹ ಅಪರಾಧಿಗಳ ವಿರುದ್ಧ ನ್ಯಾಯಾಲಯ ನಿಷ್ಠುರವಾಗಿ ತೀರ್ಪು ನೀಡುತ್ತದೆ,

ನವದೆಹಲಿ; ದೇಶದಲ್ಲಿ ದ್ವೇಷ ಸಂಬಂಧಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದೂ, ಅಂಥಹ ಪ್ರಕರಣಗಳ ವಿರುದ್ಧ ನ್ಯಾಯಾಲಯ ನಿಷ್ಠುರವಾಗಿ ತೀರ್ಪು ನೀಡುತ್ತದೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ಆಂಗ್ಲ ದೈನಿಕವೊಂದಕ್ಕೆ ನೀಡಿದ ಸಂದರ್ಶನಲ್ಲಿ ನ್ಯಾಯಮೂರ್ತಿ ದತ್ತು ಅವರು, ಕಾನೂನೇ ಸರ್ವೋಚ್ಚವಾಗಿರುವ ಭಾರತದಲ್ಲಿ ಕಾನೂನಿಗೆ ಗರಿಷ್ಠ ಪ್ರಾಧಾನ್ಯವಿದೆ. ಅಂತೆಯೇ ಕಾನೂನಿನ ಆಡಳಿತವನ್ನು ಎತ್ತಿ ಹಿಡಿಯಲು ನ್ಯಾಯಾಲಯಗಳು ತಮ್ಮಿಂದ ಸಾಧ್ಯವಿರುವ ಎಲ್ಲ ಯತ್ನಗಳನ್ನು ಮಾಡುತ್ತಿವೆ. ಅಸಹಿಷ್ಣುತೆಯ ದ್ವೇಷಾಪರಾಧಗಳಿಗೆ ನ್ಯಾಯಾಲಯಗಳು ಕಠಿಣ ಶಿಕ್ಷೆ ನೀಡಲಿವೆ ಎಂದು ತಿಳಿಸಿದ್ದಾರೆ.
ವಿಭಜಕ ಶಕ್ತಿಗಳಿಂದ ಪ್ರಜೆಗಳನ್ನು ರಕ್ಷಿಸುವ ಮೂಲಭೂತ ಕರ್ತವ್ಯ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರಕಾರದ್ದಾಗಿರುತ್ತದೆ ಎಂದು ಹೇಳಿದ ದತ್ತು, ಕಾನೂನಿನ ಚೌಕಟ್ಟಿನಲ್ಲಿ ದೇಶದ ಪ್ರಜೆಗಳು ತಮ್ಮ ಮೂಲಭೂತ ಹಕ್ಕುಗಳನ್ನು ಅನುಭವಿಸಲು ತಾವು ನೆರವು ನೀಡುವುದಾಗಿ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


