ದೇಶ

ಲಾಲೂ-ನಿತೀಶ್ ರಾಹುಲ್ ಜೊತೆ ವೇದಿಕೆ ಹಂಚಿಕೊಳ್ಳುತ್ತಿಲ್ಲವೇಕೆ?: ಸುಶೀಲ್ ಮೋದಿ ಪ್ರಶ್ನೆ

ಮೈತ್ರಿ ಪಕ್ಷ, ಜನತಾ ಪರಿವಾರವೆಂದು ಬಾಯಿ ಬಾಯಿ ಹೊಡೆದುಕೊಳ್ಳುತ್ತಿರುವ ನಾಯಕರಾದ ನಿತೀಶ್ ಕುಮಾರ್ ಹಾಗೂ ಲಾಲೂ ಪ್ರಸಾದ್ ಅವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲು ಮುಂದೆ ಬರುತ್ತಿಲ್ಲವೇಕೆ ಎಂದು ಬಿಹಾರ ಮಾಜಿ...

ಲಾಲೂ-ನಿತೀಶ್ ರಾಹುಲ್ ಜೊತೆ ವೇದಿಕೆ ಹಂಚಿಕೊಳ್ಳುತ್ತಿಲ್ಲವೇಕೆ?: ಸುಶೀಲ್ ಮೋದಿ ಪ್ರಶ್ನೆ
ಬಿಹಾರ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ (ಸಂಗ್ರಹ ಚಿತ್ರ)
Published On :

ನವದೆಹಲಿ: ಮೈತ್ರಿ ಪಕ್ಷ, ಜನತಾ ಪರಿವಾರವೆಂದು ಬಾಯಿ ಬಾಯಿ ಹೊಡೆದುಕೊಳ್ಳುತ್ತಿರುವ ನಾಯಕರಾದ ನಿತೀಶ್ ಕುಮಾರ್ ಹಾಗೂ ಲಾಲೂ ಪ್ರಸಾದ್ ಅವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲು ಮುಂದೆ ಬರುತ್ತಿಲ್ಲವೇಕೆ ಎಂದು ಬಿಹಾರ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಸೋಮವಾರ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಬಿಹಾರ ಚುನಾವಣೆ ನಿಮಿತ್ತ ರಾಹುಲ್ ಗಾಂಧಿ ಅವರು ಬಿಹಾರದಾದ್ಯಂತ ಹಲವು ರ್ಯಾಲಿಗಳನ್ನು ಏರ್ಪಡಿಸಿ ಭಾಷಣ ಮಾಡುತ್ತಿದ್ದಾರೆ. ಆದರೆ, ವಿಭಜಿತ ಜ್ಯಾತ್ಯಾತೀತ ಮೈತ್ರಿ ಪಕ್ಷಗಳೆಂದು ಹೇಳಿಕೆ ನೀಡುತ್ತಿರುವವರು ನಾಯಕರು ಮಾತ್ರ ರಾಹುಲ್ ಜೊತೆ ವೇದಿಕೆ ಹಂಚಿಕೆಕೊಳ್ಳದಿರುವುದು ನಿಜಕ್ಕೂ ಆಶ್ಚರ್ಯವಾಗುತ್ತಿದೆ ಎಂದು ಹೇಳಿದ್ದಾರೆ.

ನಿತೀಶ್ ಕುಮಾರ್ ಹಾಗೂ ಲಾಲೂ ಪ್ರಸಾದ್ ಅವರು ನಡೆದುಕೊಳ್ಳುತ್ತಿರುವುದನ್ನು ನೋಡಿದರೆ, ಈ ಮೊದಲೇ ಇಬ್ಬರು ರಾಹುಲ್ ಜೊತೆ ದೂರವಿರಲು ನಿರ್ಧರಿಸಿದ್ದಾರೆಂದು ತಿಳಿದುಬರುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮೈತ್ರಿಕೂಟ ಪಕ್ಷಗಳಲ್ಲಿ ಈ ರೀತಿಯ ನಡವಳಿಕೆ ನಿಜಕ್ಕೂ ಒಳ್ಳೆಯದಲ್ಲ.

ಜಾತ್ಯಾತೀತ ಮೈತ್ರಿಕೂಟ ಪಕ್ಷಗಳು ಒಡೆದು ಹೋಗುವುದು ಹೊಸದೇನಲ್ಲ. ಈ ಹಿಂದೆಯೂ ಮೈತ್ರಿಯಾಗಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ಎನ್ ಸಿಪಿ ನಾಯಕ ತರಿಕ್ ಅನ್ವರ ಸಹ ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡು ಮೈತ್ರಿಕೂಟದಿಂದ ಹೊರಬಂದಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.