ದೇಶ

ಎಆರ್ ರೆಹಮಾನ್ ಗೆ ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಭಾರತೀಯ ಸಂಗೀತ ಲೋಕವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ...

ಎಆರ್ ರೆಹಮಾನ್ ಗೆ ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
ಎಆರ್ ರೆಹಮಾನ್
Published On :
ಮುಂಬೈ: ಭಾರತೀಯ ಸಂಗೀತ ಲೋಕವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರಿಗೆ ನಿನ್ನೆ ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. 
ಪಂಡಿತ್ ಹೃದಯನಾಥ್ ಮಂಗೇಶ್ಕರ್ ಅವರ ಜನ್ಮ ದಿನದಂದು 55ನೇ ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ರೆಹಮಾನ್ ಅವರಿಗೆ ಖ್ಯಾತ ಬಾಲಿವುಡ್ ನಿರ್ದೇಶಕ ಸುಭಾಶ್ ಗಾಯ್ ಅವರು ಪ್ರಧಾನ ಮಾಡಿದರು.  ಹೃದಯನಾಥ್ ಮಂಗೇಶ್ಕರ್ ಅವರು ಖ್ಯಾತ ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಆಶಾ ಭೋಂಸ್ಲೆ ಅವರ ಸಹೋದರ.
ಈ ಹಿಂದೆ ಲತಾ ಮಂಗೇಶ್ಕರ್, ಆಶಾ ಭೋಂಸ್ಲೆ, ಅಮಿತಾಬ್ ಬಚ್ಚನ್ ಮತ್ತು ಸುಲೋಚನ ಥೈ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.