ದೇಶ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರು ಪ್ರಾಣಿಗಳು, ಕ್ಷಮೆಗೆ ಅರ್ಹರಲ್ಲ: ಸುಪ್ರೀಂ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರು ಪ್ರಾಣಿಗಳು ಎಂದಿರುವ ಸುಪ್ರೀಂ ಕೋರ್ಟ್, ಅವರ ಬಗ್ಗೆ ಕರುಣೆ ತೋರಬೇಕಾಗಿಲ್ಲ...

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರು ಪ್ರಾಣಿಗಳು, ಕ್ಷಮೆಗೆ ಅರ್ಹರಲ್ಲ: ಸುಪ್ರೀಂ
Those committing sex crimes against minors are 'animals: SC
Published On :

ನವದೆಹಲಿ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರು ಪ್ರಾಣಿಗಳು ಎಂದಿರುವ ಸುಪ್ರೀಂ ಕೋರ್ಟ್, ಅವರು ಕ್ಷಮೆಗೆ ಅರ್ಹರಲ್ಲ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಹಾಗೂ ನ್ಯಾಯಮೂರ್ತಿ ಅಮಿತವ ರಾಯ್ ಅವರನ್ನೊಳಗೊಂಡ ಸುಪ್ರೀಂ ಪೀಠ, 2010ರಲ್ಲಿ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕುಲದೀಪ್ ಕುಮಾರ್‌ಗೆ ನೀಡಿದ್ದ 10 ವರ್ಷಗಳ ಜೈಲು ಶಿಕ್ಷೆಯನ್ನು ಇಂದು ಎತ್ತಿ ಹಿಡಿದಿದೆ.

ಈ ವೇಳೆ, 'ಇದೊಂದು ಕ್ಷಮಿಸಲಾರದ ಕೃತ್ಯ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರು ಪ್ರಾಣಿಗಳು. ನ್ಯಾಯಾಲಗಳು ಅವರ ಬಗ್ಗೆ ಕರುಣೆ ತೋರಬೇಕಾಗಿಲ್ಲ' ಎಂದು ಹೇಳಿದ ಸುಪ್ರೀಂ ಪೀಠ, ಜೈಲು ಶಿಕ್ಷೆಯ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರ ಪುರುಷತ್ವ ಹರಣ ಮಾಡಬೇಕೆಂದು ಮದ್ರಾಸ್ ಹೈಕೋರ್ಟ್ ಶಿಫಾರಸು ಮಾಡಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಕಾಮುಕರಿಗೆ ಕಠಿಣ ಸಂದೇಶ ರವಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.