2 ಗುಂಪುಗಳ ನಡುವೆ ಘರ್ಷಣೆ: 11 ಮಂದಿಗೆ ಗಂಭೀರ ಗಾಯ
ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ...

Published On :
ಹಾಸನ: ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಶೇರಗಾರನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಎರಡು ಗುಂಪುಗಳು ಪರಸ್ಪರ ಮಚ್ಚು ಲಾಂಗುಗಳಿಂದ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ 9 ಜನರ ತಲೆಗೆ ಮಚ್ಚಿನೇಟು ಬಿದ್ದಿದ್ದು ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 60 ವರ್ಷದ ಲಕ್ಷ್ಮೀ ಎಂಬ ಮಹಿಳೆ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಒಟ್ಟಾರೆ 11 ಮಂದಿ ಈ ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾಮದ ನಿವಾಸಿ ಮಹೇಶ್ ಮತ್ತು ಸತ್ತೀ ಗೌಡ ಮೇಲೆ ಹಲ್ಲೆ ಆರೋಪ ಕೇಳಿಬಂದಿದ್ದು, ಅವರಿಬ್ಬರು ಗ್ರಾಮದಿಂದ ಪರಾರಿಯಾಗಿದ್ದಾರೆ. ಘಟನೆ ಬಗ್ಗೆ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


