ದೇಶ

ಸುದೀರ್ಘ 139 ದಿನಗಳ ಮುಷ್ಕರ ಹಿಂಪಡೆದ ಎಫ್‌ಟಿಐಐ ವಿದ್ಯಾರ್ಥಿಗಳು

ಪುಣೆಯ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ(ಎಫ್‌ಟಿಐಐ) ಅಧ್ಯಕ್ಷ ಗಜೇಂದ್ರ ಚೌಹಾಣ್ ಅವರ ನೇಮಕವನ್ನು ವಿರೋಧಿಸಿ ಕಳೆದ 139 ದಿನಗಳಿಂದ...

ಸುದೀರ್ಘ 139 ದಿನಗಳ ಮುಷ್ಕರ ಹಿಂಪಡೆದ ಎಫ್‌ಟಿಐಐ ವಿದ್ಯಾರ್ಥಿಗಳು
ಪ್ರತಿಭಟನಾ ನಿರತ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ)
Published On :

ಮುಂಬೈ: ಪುಣೆಯ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ(ಎಫ್‌ಟಿಐಐ) ಅಧ್ಯಕ್ಷ ಗಜೇಂದ್ರ ಚೌಹಾಣ್ ಅವರ ನೇಮಕವನ್ನು ವಿರೋಧಿಸಿ ಕಳೆದ 139 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಎಫ್‌ಟಿಐಐ ವಿದ್ಯಾರ್ಥಿಗಳು ಬುಧವಾರ ಹಿಂಪಡೆದಿದ್ದಾರೆ.

ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಫ್‌ಟಿಐಐ ವಿದ್ಯಾರ್ಥಿ ನಾಯಕ ರಾಕೇಶ್ ಶುಕ್ಲಾ ಅವರು ಮುಷ್ಕರ ಹಿಂಪಡೆಯುತ್ತಿರುವುದನ್ನು ಖಚಿತಪಡಿಸಿದ್ದಾರೆ. ಆದರೆ ಶಾಂತಿಯುತ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಭಾರತೀಯ ಸಮಾಜದಲ್ಲಿ ನಿರಂಕುಶವಾದಿಗಳ ಪಡೆಗಳು ಮತ್ತಷ್ಟು ಬಲಗೊಳ್ಳುತ್ತಿವೆ ಎಂದು ಶುಕ್ಲಾ ಆರೋಪಿಸಿದ್ದಾರೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜವರ್ಧನ್ ಸಿಂಗ್ ರಾಠೋಡ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಮಾತುಕತೆಯ ಬಳಿಕ ಎಫ್‌ಟಿಐಐ ವಿದ್ಯಾರ್ಥಿಗಳು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.

ನಟ ಹಾಗೂ ಬಿಜೆಪಿ ನಾಯಕ ಗಜೇಂದ್ರ ಚೌಹಾಣ್ ಅವರ ನೇಮಕವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಎಫ್ ಟಿಐಐ ವಿದ್ಯಾರ್ಥಿಗಳು, ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಕೆಲವು ವಿದ್ಯಾರ್ಥಿಗಳು ಆಸ್ಪತ್ರೆಗೂ ದಾಖಲಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.